ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ !! ಇನ್ನು ಮುಂದೆ ಕಾಲೇಜುಗಳಲ್ಲಿ ಮೊಬೈಲ್‌ ಮತ್ತು ಲ್ಯಾಪ್‌ಟಾಪ್‌ ನಿಷೇಧ..

Featured, ರಾಜ್ಯ ನ್ಯೂಸ್

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ಇನ್ನು ಮುಂದೆ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡಲು ಮುಂದಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿನ ಸಮಯದಲ್ಲಿ ಮೊಬೈಲ್‌, ಲ್ಯಾಪ್‌ಟಾಪ್ ಇಟ್ಟುಕೊಳ್ಳುವುದನ್ನು ಶೈಕ್ಷಣಿಕ ಹಿತದೃಷ್ಟಿಯಿಂದ ಸಂಪೂರ್ಣವಾಗಿ ನಿಷೇಧಿಸುವ ಆದೇಶವನ್ನು ಹೊರಡಿಸಿದೆ. ಹಾಗಾಗಿ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಹೇಳಲಾಗಿದೆ..

ಸಿಎಂ ಸೂಚನೆ ಮೇರೆಗೆ ಪ್ರಥಮ ಪಿಯುಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ ಬ್ಯಾನ್ ಆದೇಶ ಜಾರಿಗೆ ತರುವಂತೆ ಎಲ್ಲ ಉಪ ನಿರ್ದೇಶಕರಿಗೆ ಪಿಯು ಬೋರ್ಡ್‌ ಸುತ್ತೋಲೆ ಹೊರಡಿಸಿದೆ.