ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪ ಹೊತ್ತು ಸಿಬಿಐ ವಶದಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಬಂಧನದ ಬಗ್ಗೆ ಇದೇ ಮೊದಲ ಬಾರಿಗೆ ಇಂದ್ರಾಣಿ ಮುಖರ್ಜಿ ಪ್ರತಿಕ್ರಿಯಿಸಿದ್ದು, “ಪಿ ಚಿದಂಬರಂ ಅವರನ್ನು ಬಂಧಿಸಿರುವುದು ಒಳ್ಳೆಯ ವಿಚಾರ. ಒಳ್ಳೆಯ ಸುದ್ದಿ” ಎಂದು ಹೇಳಿದ್ದಾರೆ.
ಮಾದ್ಯಮಗಳೊಂದಿಗೆ ಚಿದಂಬರಂ ಬಂಧನದ ಬಗ್ಗೆ ಮಾತನಾಡಿದರು. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ಕಾರ್ತಿ ಚಿದಂಬರಂ ಅವರ ಜಾಮೀನು ಕೂಡ ತಿರಸ್ಕೃತವಾಗಲಿ ಎಂದು ಹೇಳಿದ್ದಾರೆ.
ಇನ್ನು ಕಳೆದ ಫೆಬ್ರವರಿ 17, 2018ರಲ್ಲಿ ಇಂದ್ರಾಣಿ ಅಪ್ರೂವರ್ (ಪ್ರಮುಖ ಸಾಕ್ಷಿ) ಆಗಿ ಸಿಆರ್ ಪಿಸಿ ಸೆಕ್ಷನ್ 164 ಅನ್ವಯ ಮ್ಯಾಜಿಸ್ಟ್ರೇಟ್ ಮುಂದೆ ಕಾರ್ತಿ ಚಿದಂಬರಂ ಹಾಗೂ ಪಿ ಚಿದಂಬರಂ ವಿರುದ್ಧ ಹೇಳಿಕೆ ದಾಖಲಿಸಿದ್ದರಿಂದ ಪಿ ಚಿದಂಬರಂ ಬಂಧಿಸಲು ಸಾಧ್ಯವಾಗಿದೆ ಎನ್ನಲಾಗಿತ್ತು. ಇಂದ್ರಾಣಿ ನೀಡಿರುವ ಇ-ಮೇಲ್ ಸಾಕ್ಷಿ, ಹೋಟೆಲ್ ಹಯಾತ್ ನಲ್ಲಿ ಭೇಟಿ ಕುರಿತ ದಾಖಲೆ, ಚಿದಂಬರಂ ನೀಡಿದ ಸೂಚನೆ, ಮುಂತಾದ ಸಾಕ್ಷಿಗಳೇ ಸದ್ಯಕ್ಕೆ ಇಡಿ ಹಾಗೂ ಸಿಬಿಐಗೆ ಪ್ರಮುಖ ಅಸ್ತ್ರಗಳಾಗಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…