ಪಿ. ಚಿದಂಬರಂ ನ್ಯಾಯಾಂಗ ಬಂಧನ ಅಕ್ಟೋಬರ್ 17ರವರೆಗೆ ವಿಸ್ತರಣೆ -Vishwanews24
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಸಿಬಿಐ ವಶದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 17ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿತು.
ಇದರೊಂದಿಗೆ ಚಿದಂಬರಂ ಇನ್ನಷ್ಟು ದಿನಗಳ ಕಾಲ ತಿಹಾರ್ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.
ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಪಿ. ಚಿದಂಬರಂ ಅವರನ್ನು ಕಳೆದ ಆಗಸ್ಟ್ 21ರಂದು ಚಿದಂಬರಂ ಅವರನ್ನು ಬಂಧಿಸಲಾಗಿತ್ತು.
