ನವದೆಹಲಿ : INX ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿರುವ ಹಿನ್ನೆಲೆಯಲ್ಲಿ, ನಿರೀಕ್ಷಣಾ ಜಾಮೀನು ನೀಡುವಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ವಜಾಗೊಳಿಸಿದೆ.
ಚಿದಂಬರಮ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ಕೊಡುವಂತೆ ಜಾರಿ ನಿರ್ದೇಶನಾಲಯ ಮಾಡಿಕೊಂಡ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಇವತ್ತು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಪೀಠದ ನ್ಯಾಯಾಧೀಶರು, ಈ ಹೊತ್ತಿನಲ್ಲಿ ಚಿದಂಬಮ್ ಅವರಿಗೆ ನಿರೀಕ್ಷಣಾ ಜಾಮೀನು ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ತೀರ್ಮಾನಿಸಿದರು.
ನಿರೀಕ್ಷಣಾ ಜಾಮೀನು ಕೊಡಲೇಬೇಕೆಂದಿಲ್ಲ. ಆರ್ಥಿಕ ಅಪರಾಧದ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನನ್ನು ವಿಶೇಷ ಸಂದರ್ಭದಲ್ಲಿ ಮಾತ್ರ ನೀಡಬಹುದಾಗಿದೆ. ತನಿಖೆಯ ಆರಂಭಿಕ ಹಂತಗಳಲ್ಲೇ ನಿರೀಕ್ಷಣಾ ಜಾಮೀನು ನೀಡಿದರೆ ತನಿಖೆಯ ಕಾರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
2017ರ ಮೇ 15 ರಂದು ಸಿಬಿಐ ಚಿದಂಬರಂ ವಿರುದ್ಧ ಪ್ರಕರಣ ದಾಖಲಿಸಿತ್ತು. ಐಎನ್ ಎಕ್ಸ್ ಮಾಧ್ಯಮ ಸಮೂಹ ವಿದೇಶದಿಂದ 305 ಕೋಟಿ ರೂಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಳ್ಳಲು ಚಿದು ಅವಕಾಶ ಕೊಟ್ಟಿದ್ದರು. 2007ರಲ್ಲಿ ಹಣಕಾಸು ಸಚಿವರಾಗಿದ್ದ ವೇಳೆ ಚಿದಂಬರಂ ಈ ಅಕ್ರಮಕ್ಕೆ ಅವಕಾಶ ನೀಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣ ನಡೆದು 10 ವರ್ಷಗಳ ಬಳಿಕ ಸಿಬಿಐ ಹಾಗೂ ಇಡಿ ಪ್ರತ್ಯೇಕವಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ್ದವು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…