ಪುಂಜಾಲಕಟ್ಟೆ,: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಅನಾಹುತ ಸಂಭವಿಸುತ್ತಿದೆ. ಹಲವೆಡೆ ಗುಡ್ಡ ಕುಸಿದು ರಸ್ತೆಗಳು ಬಂದ್ ಆಗಿವೆ. ಇನ್ನೊಂದೆಡೆ ಪುಂಜಾಲಕಟ್ಟೆ ಬಳಿ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜು.19ರ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಮೃತರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.
ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಲಾರಿ ಪಲ್ಟಿಯಾಗಿ ಸುಮಾರು ಸಮಯ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…