Featured

ಪುಂಜಾಲಕಟ್ಟೆ : ಲಾರಿ ಪಲ್ಟಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ – vishwanews24

ಪುಂಜಾಲಕಟ್ಟೆ : ಮಗುಚಿ ಬಿದ್ದ ಲಾರಿ ; ಓರ್ವ ಸ್ಥಳದಲ್ಲಿಯೇ ಸಾವು, ಮತ್ತಿಬ್ಬರು ಗಂಭೀರ

ಪುಂಜಾಲಕಟ್ಟೆ,: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಅನಾಹುತ ಸಂಭವಿಸುತ್ತಿದೆ. ಹಲವೆಡೆ ಗುಡ್ಡ ಕುಸಿದು ರಸ್ತೆಗಳು ಬಂದ್ ಆಗಿವೆ. ಇನ್ನೊಂದೆಡೆ ಪುಂಜಾಲಕಟ್ಟೆ ಬಳಿ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜು.19ರ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಮೃತರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.

ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಲಾರಿ ‌ಪಲ್ಟಿಯಾಗಿ ಸುಮಾರು ಸಮಯ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

6 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

6 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

7 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

7 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

7 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

7 hours ago