ಬೆಂಗಳೂರು: ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮೀಟರ್ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸೂಚಿಸಿದ್ದಾರೆ.
ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಪುಣ್ಯಕ್ಷೇತ್ರಗಳ ಬಳಿ ಇರುವ ಜಲಮೂಲಗಳಲ್ಲಿ ಭಕ್ತರು, ಪ್ರವಾಸಿಗರು ಸ್ನಾನಮಾಡಿ ಉಳಿದ ಶ್ಯಾಂಪೂ ಮತ್ತು ಸೋಪಿನ ಸ್ಯಾಷೆಗಳನ್ನು ದಂಡೆಯಲ್ಲಿ ಎಸೆದು ಹೋಗುತ್ತಿದ್ದಾರೆ. ಅಲ್ಲಿನ ಪರಿಸರದಲ್ಲಿ ಕಸದ ಪ್ರಮಾಣ ಹೆಚ್ಚುವುದಲ್ಲದೆ, ಈ ರಾಸಾಯನಿಕ ವಸ್ತು ಮತ್ತು ಪ್ಲಾಸ್ಟಿಕ್ ಜಲಮೂಲವನ್ನು ಸೇರುತ್ತಿವೆ. ಇದರಿಂದ ನೀರು ಕಲುಷಿತವಾಗುತ್ತಿದೆ. ಜೊತೆಗೆ ಜಲಚರಗಳೂ ಸಾಯುತ್ತಿವೆ ಎಂದು ತಿಳಿಸಿದ್ದಾರೆ.
ಪುಣ್ಯಕ್ಷೇತ್ರಗಳ ಬಳಿ ಇರುವ ಸಣ್ಣ-ಪುಟ್ಟ ಅಂಗಡಿಗಳಲ್ಲಿ ಒಂದೆರಡು ರೂಪಾಯಿಯ ಶ್ಯಾಂಪೂ ಮತ್ತು ಐದರಿಂದ ಹತ್ತು ರೂಪಾಯಿಯ ಸೋಪಿನ ಪ್ಯಾಕೆಟ್ ಮಾರಾಟ ಮಾಡಲಾಗುತ್ತಿದೆ. ಅಗ್ಗದ ಬೆಲೆಯಲ್ಲಿ ಸಿಗುವುದರಿಂದ, ಉಳಿದ ಸೋಪು-ಶ್ಯಾಂಪೂವನ್ನು ಜನರು ಅಲ್ಲೇ ಎಸೆದು ಹೋಗುತ್ತಾರೆ. ಹೀಗಾಗಿ ಇವು ಸುಲಭವಾಗಿ ಸಿಗದಂತೆ ಕ್ರಮ ತೆಗೆದುಕೊಳ್ಳಬೇಕು. ಇದಕ್ಕಾಗಿ ಪುಣ್ಯಕ್ಷೇತ್ರಗಳ ಜಲಮೂಲಗಳಿಂದ ೫೦೦ ಮೀಟರ್ ವ್ಯಾಪ್ತಿಯಲ್ಲಿ ಇವುಗಳ ಮಾರಾಟವನ್ನು ನಿಷೇಧಿಸಬೇಕು ಎಂದು ನಿರ್ದೇಶಿಸಿದ್ದಾರೆ.
ಹಲವು ಭಕ್ತರು ಮೂಢನಂಬಿಕೆಗಳ ಕಾರಣದಿಂದ, ಸ್ನಾನದ ನಂತರ ಒದ್ದೆ ಬಟ್ಟೆಗಳನ್ನು ನೀರಿನಲ್ಲೇ ಹರಿಬಿಟ್ಟು ಹೋಗುತ್ತಿದ್ದಾರೆ. ಕೆಲವು ತೀರ್ಥಕ್ಷೇತ್ರಗಳಲ್ಲಂತೂ ರಾಶಿರಾಶಿ ವಸ್ತ್ರಗಳು ಬಿದ್ದಿವೆ. ಇದರಿಂದಲೂ ಸ್ವಚ್ಛತೆ ಹಾಳಾಗುತ್ತಿದೆ ಮತ್ತು ಪುಣ್ಯಕ್ಷೇತ್ರಗಳ ಜಲಮೂಲಗಳು ಕಲುಷಿತವಾಗುತ್ತಿವೆ. ಈ ಕ್ರಿಯೆಯನ್ನೂ ನಿರ್ಬಂಧಿಸುವ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದಾರೆ.
ಸಂಬಂಧಿತ ಇತರ ಇಲಾಖೆಗಳ ನೆರವು ಮತ್ತು ಸಹಕಾರ ಪಡೆದು ಈ ಸೂಚನೆಗಳನ್ನು ಜಾರಿಗೆ ತರಬೇಕು. ಆಗ ಮಾತ್ರ ರಾಜ್ಯದ ನದಿ-ಕೊಳ, ಸರೋವರಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳಲು ಸಾಧ್ಯ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…
ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು…
ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ ಬೆಂಗಳೂರು : ನಕಲಿ…
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ ಪುತ್ತೂರು : ಹಿಂದೂ…