ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ ; ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ – vishwanews24

Featured, ದಕ್ಷಿಣ ಕನ್ನಡ

ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ ; ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆ

ಪುತ್ತೂರು: ಹಲವು ಸುತ್ತಿನ ಮಾತುಕತೆ ಬಳಿಕ ಕೊನೆಗೂ ಬಿಜೆಪಿ ದುಃಸ್ವಪನ್ನವಾಗಿ ಕಾಡಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಪರಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದೆ.

ಹಲವು ಸುತ್ತಿನ ಮಾತುಕತೆ ಬಳಿಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾಗಲಿದೆ.  ಇದೀಗ ಬಿಜೆಪಿ ಮರುಸೇರ್ಪಡೆಯಾಗಲು ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪುತ್ತಿಲರ ಜೊತೆಗಿನ ಸಂಧಾನ ಯಶಸ್ವಿಯಾಗಿದೆ. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತಿತರಿದ್ದರು.

 

Leave a Reply