ಪುತ್ತೂರು: ಕೈಗಾರಿಕಾ ಅಭಿವೃದ್ಧಿ ಮತ್ತು ಉದ್ಯೋಗಾವಕಾಶ ಹೆಚ್ಚಳದ ದೃಷ್ಟಿ ಇಟ್ಟುಕೊಂಡು ಪುತ್ತೂರಿನಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ನಿರ್ಮಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 100 ಎಕರೆ ಜಮೀನು ಗುರುತಿಸಲಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಸರ್ವೆ ಕಾರ್ಯ ನಡೆಯಲಿದೆ.
ಶಾಸಕ ಸಂಜೀವ ಮಠಂದೂರು ಮುತುವರ್ಜಿಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣ ನಡೆಯಲಿದ್ದು, ಅನುಷ್ಠಾನದ ಹೊಣೆಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ವಹಿಸಿಕೊಳ್ಳಲಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ನಾನಾ ಭಾಗಗಳ ಪ್ರತಿಷ್ಠಿತ ಉದ್ಯಮಗಳಿಗೆ ಪುತ್ತೂರಿನಲ್ಲಿ ಕೈಗಾರಿಕೆ ಸ್ಥಾಪಿಸಲು ಅವಕಾಶ ನೀಡಲಾಗುತ್ತದೆ. ಈ ಮೂಲಕ ಪುತ್ತೂರಿನ ಸಾವಿರಾರು ಯುವಕ- ಯುವತಿಯರಿಗೆ ಉದ್ಯೋಗ ಸಿಗಲಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಭೂಸ್ವಾಧೀನ ವಿಭಾಗದ ಭೂಸ್ವಾಧೀನ ಅಧಿಕಾರಿ ಬಿನೋಯ್ ಮಂಗಳವಾರ ಪುತ್ತೂರಿಗೆ ಭೇಟಿ ನೀಡಿದ್ದು, ಪ್ರವಾಸಿ ಸೌಧದಲ್ಲಿ ಶಾಸಕ ಸಂಜೀವ ಮಠಂದೂರು ಜತೆ ಸಮಾಲೋಚನೆ ನಡೆಸಿದರು. ತಹಸೀಲ್ದಾರ್ ರಮೇಶ್ ಬಾಬು, ವಲಯ ಅರಣ್ಯ ಅಧಿಕಾರಿ ಬಿ.ಎಂ. ಕಿರಣ್, ಎಡಿಎಲ್‌ಆರ್ ರಮಾದೇವಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
ಪುತ್ತೂರು – ಉಪ್ಪಿನಂಗಡಿ ನಡುವಿನ ಚಿಕ್ಕಮುಡ್ನೂರು ಗ್ರಾಮದ ಕಟಾರ ಎಂಬಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣವಾಗಲಿದೆ. ಇದಕ್ಕಾಗಿ 100 ಎಕರೆ ಜಮೀನು ಗುರುತಿಸಲಾಗಿದೆ. ಮುಂದಿನ ಹಂತದಲ್ಲಿ ಸರ್ವೆ ಕಾರ್ಯ ನಡೆಯಲಿದೆ. ಈ ಜಮೀನಿನಲ್ಲಿ ಸರಕಾರಿ ಜಾಗದ ಲಭ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತದೆ. ಖಾಸಗಿ ಜಮೀನು, ಅರಣ್ಯ ಜಮೀನು ಇದೆಯೇ ಎಂಬುದನ್ನೂ ಸಮೀಕ್ಷೆ ಮಾಡಲಾಗುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ಸರಕಾರಿ ಭೂಮಿಯೇ ಹೆಚ್ಚಿನ ಪ್ರಮಾಣದಲ್ಲಿ ಲಭಿಸಿದರೆ ಉತ್ತಮ. ಪರಿಹಾರ ಕೊಡುವ ಪ್ರಮೇಯ ಬರುವುದಿಲ್ಲ. ಜಮೀನು ಆಯ್ಕೆಯಾದ ಬಳಿಕ ಸರ್ವೆ ನಡೆಸಿ, ಕೈಗಾರಿಕಾ ಕನ್ವರ್ಷನ್ ಮಾಡಿಸಿ, ಕೈಗಾರಿಕಾ ಲೇಔಟ್ ಮಾಡಿ, ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯ ಒದಗಿಸುವ ಕೆಲಸ ಕೆಐಎಡಿಬಿ ಮಾಡುತ್ತದೆ. ನಿಯಮ ಪ್ರಕಾರವೇ ಸೈಟ್‌ಗಳ ವಿಂಗಡಣೆಯಾಗಲಿದೆ. ಕೈಗಾರಿಕೋದ್ಯಮಿಗಳಿಗೆ ಕಡಿಮೆ ದರದಲ್ಲಿ ಜಮೀನು ನೀಡಬೇಕಾಗುತ್ತದೆ. 100 ಎಕರೆ ಜಮೀನು ಸ್ವಾಧೀನಪಡಿಸಿಕೊಂಡರೆ ಮೂಲಸೌಕರ್ಯಕ್ಕೆ ಅದರಲ್ಲಿ ಒಂದಷ್ಟು ಜಮೀನು ಹೋಗುತ್ತದೆ. ಉಳಿದುದನ್ನು ಸೈಟ್ ಮಾಡಿ ಹಂಚಲು ಸಾಧ್ಯವಾಗುತ್ತದೆ ಎಂದು ಬಿನೋಯ್ ತಿಳಿಸಿದರು.
ತಾಲೂಕಿನ ಇತರ ಕಡೆ ಕೂಡ ಜಮೀನು ಪರಿಶೀಲಿಸಲಾಗಿದೆ. ಆದರೆ ಕಟಾರದ ಜಮೀನು ಸಮೀಪ ಕುಮಾರಧಾರಾ ನದಿ ಇರುವ ಕಾರಣ ನೀರಿನ ಆಶ್ರಯ ಸುಲಭ. ಈ ಕಾರಣಕ್ಕೆ ಇದನ್ನು ಆಯ್ಕೆ ಮಾಡಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…