ಪುತ್ತೂರಿನ ಪವಿತ್ರ ಮಣ್ಣಿನಲ್ಲಿ ದೌರ್ಜನ್ಯ ಎಸಗುವ ಅಧಿಕಾರಿಗಳಿಗೆ ಅವಕಾಶವಿಲ್ಲ : ಪುತ್ತಿಲ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರಿನ ಪವಿತ್ರ ಮಣ್ಣಿನಲ್ಲಿ ದೌರ್ಜನ್ಯ ಎಸಗುವ ಅಧಿಕಾರಿಗಳಿಗೆ ಅವಕಾಶವಿಲ್ಲ : ಪುತ್ತಿಲ

ಪುತ್ತೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದೂಗಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ. ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದುಗಳ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಲಾಗುತ್ತಿದೆ.

ಆದರೆ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ. ಇದನ್ನು ಎಷ್ಟು ಮಾತ್ರಕ್ಕೂ ಸಹಿಸಲ್ಲ. ಅನಿವಾರ್ಯವಾದರೆ ನಾವು ಸಂಘರ್ಷಕ್ಕೆ ಇಳಿಯಲೂ ಸಿದ್ಧರಿದ್ದೇವೆ ಎಂದು ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.

ಪುತ್ತೂರಿನಲ್ಲಿ ನಡೆದ ಇತ್ತೀಚಿನ ಅಹಿತಕರ ಘಟನೆ ಹಾಗೂ ಹಿಂದೂ ಯುವಕರ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪುತ್ತೂರಿನ ಪವಿತ್ರ ಮಣ್ಣಿನಲ್ಲಿ ದೌರ್ಜನ್ಯ ಎಸಗುವ ಅಧಿಕಾರಿಗಳಿಗೆ ಸೇವೆ ಸಲ್ಲಿಸುವ ಅವಕಾಶವನ್ನು ನಾವು ಕೊಡುವುದಿಲ್ಲ ಎಂದರು.

6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ : ಮಲ್ಲಿಕಾರ್ಜುನ ಖರ್ಗೆ – Vishwanews24

ಹಿಂದೂ ಸಮಾಜದ ಯಾವುದೇ ಕಾರ್ಯಕರ್ತನಿಗೂ ಹಲ್ಲೆ, ದೌರ್ಜನ್ಯ ನಡೆದರೆ ಸುಮ್ಮನಿರಲ್ಲ. ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಿದ್ದೇವೆ.

ಕಾಂಗ್ರೆಸ್ ಸರಕಾರ ಬಂದಾಗ ಮಿತಿ ಮೀರಿದ ದೌರ್ಜನ್ಯ ನಡೆದಿದೆ. ಇದನ್ನು ನಾವು ಸಹಿಸಲ್ಲ. ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ, ಇದಕ್ಕೆ ಇಲಾಖೆಗಳೇ ಕಾರಣರಾಗುತ್ತದೆ.

ಹಿಂದುಗಳಿಗೆ ನ್ಯಾಯ ಕೊಡಲು ನಾವು ಸದಾ ಸಿದ್ಧರಿದ್ದೇವೆ. ಅದಕ್ಕಿಂತ ಮಿಗಿಲಾಗಿ ಇನ್ನೇನಾದರೂ ಸಂಘರ್ಷ ನಡೆದರೆ ಅದಕ್ಕೆ ಪೊಲೀಸರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ : ಮಲ್ಲಿಕಾರ್ಜುನ ಖರ್ಗೆ – Vishwanews24

Leave a Reply