Featured

ಪುತ್ತೂರಿನ ಮೊದಲ ಕಿನ್ನಿಪಿಲಿ ಖ್ಯಾತಿಯ ‘ಪಿಲಿ ರಾಧಣ್ಣ’ ನಿಧನ  – vishwanews24

ಪಿಲಿನಲಿಕೆಯ ಬ್ರಾಂಡ್ ಪುತ್ತೂರಿನ ಮೊದಲ ಕಿನ್ನಿಪಿಲಿ ಖ್ಯಾತಿಯ ‘ಪಿಲಿ ರಾಧಣ್ಣ’ ನಿಧನ

ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ.

ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು.

65 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಇದ್ದದ್ದು ಎರಡು ಪಿಲಿ. ಒಂದು ಪಿಲಿ ಸಂಕಪ್ಪಣ್ಣ, ಇನ್ನೊಂದು ಪಿಲಿ ಗಂಗಣ್ಣ. ಪಿಲಿ ಸಂಕಪ್ಪ ಶೆಟ್ಟಿ ಅವರ ಪುತ್ರನೇ ಪಿಲಿ ರಾಧಣ್ಣ. ಸಂಕಪ್ಪ ಅವರು ಸುಮಾರು 30 ವರ್ಷಗಳ ಕಾಲ ಕುಣಿದವರು. ರಾಧಾಕೃಷ್ಣ ಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ ತಂದೆ ಸಂಕಪ್ಪ ಅವರ ಜೊತೆ ಕಿನ್ನಿಪಿಲಿ ವೇಷಧಾರಿಯಾಗಿ ಸೇರಿಸಿಕೊಂಡರು. ಅಲ್ಲಿಂದ ಪಿಲಿ ವೇಷ ಶುರು. ಅಪ್ಪ-ಮಗ ಇಬ್ಬರು 10 ವರ್ಷಗಳ ಕಾಲ ಜತೆ ಜತೆಯಾಗಿ ಹೆಜ್ಜೆ ಹಾಕಿದರು. ಕಿನ್ನಿ ಪಿಲಿಯಾಗಿ ಟೋಪಿ ಹಾಕಿಕೊಂಡು ಹೊರಟ ಪುಟ್ಟ ಬಾಲಕ ಮುಂದೆ ಪಿಲಿ ರಾಧಣ್ಣ ಆಗಿ ಗುರುತಿಸಿಕೊಂಡಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಪುತ್ರಿಯನ್ನು ಅಗಲಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago