Featured

ಪುತ್ತೂರಿನ ರಾಕೇಶ್ ಕೃಷ್ಣ , ಬೆಂಗಳೂರಿನ ವೀರ್ ಕಶ್ಯಪ್ ಸೇರಿ ರಾಜ್ಯದ ಇಬ್ಬರ ಸಹಿತ 32 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿ -Vishwanews24

ಪುತ್ತೂರಿನ ರಾಕೇಶ್ ಕೃಷ್ಣ , ಬೆಂಗಳೂರಿನ ವೀರ್ ಕಶ್ಯಪ್ ಸೇರಿ ರಾಜ್ಯದ ಇಬ್ಬರ ಸಹಿತ 32 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿ -Vishwanews24

ನವದೆಹಲಿ: ಕರ್ನಾಟಕ ರಾಜ್ಯದ ಇಬ್ಬರು ಮಕ್ಕಳು ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ನೀಡುವ 2021ನೇ ಸಾಲಿನ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ’ ಪ್ರಶಸ್ತಿಗೆ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ ವೀರ್ ಕಶ್ಯಪ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರಿಬ್ಬರಿಗೂ ಆವಿಸ್ಕಾರ ವಲಯದಲ್ಲಿ ಪುರಸ್ಕಾರ ಲಭಿಸಿದೆ.

ಇದನ್ನೂ ಓದಿ : ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆ : ಸದಾನಂದ ಗೌಡ -Vishwanews24

32 ಮಕ್ಕಳ ಪೈಕಿ ನಾವೀನ್ಯತೆ ವಿಭಾಗದಲ್ಲಿ 9, ಕಲೆ ಸಂಸ್ಕೃತಿ ವಿಭಾಗದಲ್ಲಿ 7, ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆ ವಿಭಾಗದಲ್ಲಿ 5, ಶೌರ್ಯ ವಿಭಾಗ 3 ಹಾಗೂ ಸಾಮಾಜಿಕ ಸೇವಾ ವಿಭಾಗದಲ್ಲಿ ಒಬ್ಬ ಮಕ್ಕಳಿಗೆ ಪ್ರಶಸ್ತಿ ಲಭಿಸಿದೆ.

ಸರ್ಕಾರ ಪ್ರತೀ ವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯ ಪದಕ 1 ಲಕ್ಷ ನಗದು ಒಳಗೊಂಡಿದೆ. ವಿಜೇತರೊಂದಿಗೆ ಪ್ರಧಾನಿ ಮೋದಿ ಇಂದು ಮಧ್ಯಾಹ್ನ 12 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ : ಉಡುಪಿ : ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ಗೆದ್ದ ಕರಾವಳಿ ಕಾವಲು ಪೊಲೀಸ್ ತಂಡ -Vishwanews24

ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ರಾಕೇಶ್ ಕೃಷ್ಣ ಮತ್ತು ವೀರ್ ಕಶ್ಯಪ್‌ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ‘ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್‌ಗೆ ಅಭಿನಂದನೆಗಳು. ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ’ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ಕಾಪು SCDCC ಬ್ಯಾಂಕ್- ಜನವರಿ 28 ರಂದು ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ-vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago