Featured

ಪುತ್ತೂರು:ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ನ ಅಕ್ಷಯ್‌ ಬರ್ಬರ ಹತ್ಯೆ- ಇಬ್ಬರು ಠಾಣೆಗೆ ಶರಣು – vishwanews24

ಪುತ್ತೂರು:ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ನ ಅಕ್ಷಯ್‌ ಬರ್ಬರ ಹತ್ಯೆ- ಇಬ್ಬರು ಠಾಣೆಗೆ ಶರಣು

ಪುತ್ತೂರು: ಪುತ್ತೂರಿನ ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ತಂಡದ ಸಾರಥ್ಯ ವಹಿಸಿದ್ಧ ಅಕ್ಷಯ್‌ ಕಲ್ಲೇಗ(24) ಅವರನ್ನು ನೆಹರೂ ನಗರದಲ್ಲಿ ನ.6ರ ಸೋಮವಾರ ತಡರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ನಡೆದಿದೆ.

ಅಕ್ಷಯ್‌ ಕಲ್ಲೇಗ ಕಳೆದ 6 ವರ್ಷಗಳಿಂದ ಇವರು ಟೈಗರ್ಸ್ ಕಲ್ಲೇಗ ಎಂಬ ಹುಲಿ ವೇಷ ತಂಡವನ್ನು ಮುನ್ನಡೆಸುತ್ತಿದ್ದರು. ಈ ತಂಡ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನೂ ಬಾಚಿಕೊಂಡಿತ್ತು.

ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಅಕ್ಷಯ್‌ ನನ್ನು ದುಷ್ಕರ್ಮಿಗಳ ತಂಡ ನೆಹರೂ ನಗರಕ್ಕೆ ಬರಲು ಹೇಳಿ ಬಳಿಕ ಅಟ್ಟಾಡಿಸಿಕೊಂಡು ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಅಕ್ಷಯ್‌ ವಿವೇಕಾನಂದ ಕಾಲೇಜ್‌ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

23 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

23 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

24 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

24 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

24 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago