ಪುತ್ತೂರು: ವಿವಾಹಿತ ಮಹಿಳೆಗೆ ಅರ್ಕೆಸ್ಟ್ರಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡು, ಆಕೆಯ ನಗ್ನ ಚಿತ್ರ ಸೆರೆಹಿಡಿದು ಲಕ್ಷಾಂತರ ರೂ. ಹಣ ನೀಡುವಂತೆ ಬ್ಯ್ಲಾಕ್ ಮೇಲ್ ಮಾಡಿದ ಯುವಕನ ವಿರುದ್ದ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ದ.ಕ. ಜಿಲ್ಲೆಯ ಸುಬ್ರಮಣ್ಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ಪುತ್ತೂರಿನ ಆರ್ಲಪದವು ಮೂಲದ ನಿವಾಸಿ ಪ್ರಶಾಂತ ಭಟ್ ಮಾಣಿಲ (೩೫) ಎಂದು ಗುರುತಿಸಲಾಗಿದೆ.
ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹೆಚ್ಚಾಗಿ ಹಾಡು ಕೇಳುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ೨ ವರ್ಷಗಳ ಕಾಲ ಇವರು ಪೋನ್ ಹಾಗೂ ಪೇಸ್ ಬುಕ್ ಮೂಲಕ ಸಂಪರ್ಕದಲ್ಲಿದ್ದರು.
2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಶಿರಸಿ ದೇವಾಲಯದಲ್ಲಿ ಭೇಟಿಯಾಗಿ ಅಲ್ಲಿಂದ ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಇದಾದ ಬಳಿಕ ಆರೋಪಿಯು ಮಹಿಳೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಮಹಿಳೆಯು ಬೆದರಿಕೆ ಹೆದರಿ 25 ಸಾವಿರ ಹಣ ನೀಡಿದ್ದಾಳೆ. ನಂತರ ಆರೋಪಿಯೂ ಸಂತ್ರಸ್ತ ಮಹಿಳೆಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದು, ಮತ್ತೆ ಹಣಕ್ಕಾಗಿ ಬ್ಯ್ಲಾಕ್ ಮೇಲ್ ಮಾಡುತ್ತಿರುವ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…