Featured

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ – vishwanews24

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ

ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರು ವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿ ದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಲಾರಿ ಚಾಲಕ ಕಡೂರು ನಿವಾಸಿ ಪರ್ದಿನ್ ಖಾನ್, ಲಾರಿಯಲ್ಲಿದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜಾವೀದ್ ಪಾಷಾ ಬಂಧಿತರು. ಲಾರಿಯಲ್ಲಿದ್ದ ಇನ್ನೋರ್ವ ಆರೋಪಿ ರೆಹಮಾನ್ ಹೊಸೂರು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಉಪ್ಪಿನಂಗಡಿ, ಮಠ ಹಾಗೂ ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ಜೂ.17ರ ನಸುಕಿನ ಜಾವ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಹಾಸನ ಕಡೆಯಿಂದ ಬರುತ್ತಿದ್ದ ಈಚರ್ ಲಾರಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಅದರೊಳಗೆ 16 ಜಾನುವಾರುಗಳನ್ನು ಯಾವುದೇ ದಾಖಲಾತಿಗಳಿಲ್ಲದೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಜಾನುವಾರು ಹಾಗೂ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸನ ಸಂತೆಯಿಂದ ಜಾನುವಾರುಗಳನ್ನು ಖರೀದಿಸಿ ಕೇರಳ ರಾಜ್ಯದ ಪಾಲಕ್ಕಾಡ್‍ಗೆ ಸಾಗಿಸುತ್ತಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

4 minutes ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

24 minutes ago

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…

1 hour ago

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ – vishwanews24

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…

2 hours ago

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

2 hours ago

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ – vishwanews24

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…

2 hours ago