ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳಿಬ್ಬರ ಜಾಮೀನು ಅರ್ಜಿ ನಿರಾಕರಣೆ – vishwanews24
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳಿಬ್ಬರ ಜಾಮೀನು ಅರ್ಜಿ ನಿರಾಕರಣೆ
ಪುತ್ತೂರು: ಏಳು ತಿಂಗಳ ಹಿಂದೆ ನೆಹರೂನಗರದಲ್ಲಿ ನಡೆದಿದ್ದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
2023ರ ನವೆಂಬರ್ 7ರಂದು ಅಕ್ಷಯ್ ಕಲ್ಲೇಗ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಕರಣದ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ) ಹಾಗೂ ಕೇಶವ ಪಡೀಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿತ್ತು.
ಇದಾದ ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
