ಪುತ್ತೂರು : ಅಕ್ಷಯ್ ಕಲ್ಲೇಗ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿವೇಂಜ್ ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ಅರೆಸ್ಟ್ ಮಾಡಿದ್ದು, ಆಗಬಹುದಾಗಿದ್ದ ಕೃತ್ಯವನ್ನು ಪೊಲೀಸರು ತಡೆದಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ (36), ಪುತ್ತೂರಿನ ಮನೋಜ್ (23), ಆಶಿಕ್ (28), ಸನತ್ ಕುಮಾರ್ (24) ಎಂದು ಗುರುತಿಸಲಾಗಿದೆ.
ಬಂಧಿತರು ಅಕ್ಷಯ್ ಕಲ್ಲೆಗ ಕೊಲೆ ಪ್ರಕರಣದ ಆರೋಪಿ ಮನೀಶ್ ಸಹೋದರ ಮನೋಜ್ ನ ಮೇಲೆ ಸೇಡು ತೀರಿಸಿಕೊಳ್ಳಲು ಹಾಕಿದ್ದರು. ಈ ಮೊದಲು ಮನೋಜ್ ಗೆ ಬೆದರಿಕೆ ಕರೆ ಮಾಡಿರುವ ಆರೋಪಿಗಳು ನಿನ್ನ ತಮ್ಮ ಮನೀಶ್ ಹಾಗೂ ಉಳಿದ ಆರೋಪಿಗಳು ಜೈಲಿನಿದ್ದಾರೆ, ಆದ್ರೆ ನಿನ್ನನ್ನ ಬಿಡಲ್ಲ ಎಂದು ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದರು.
ಈ ಹಿನ್ನಲೆ ಮನೋಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ನಡುವೆ ಮನೋಜ್ ಚಲನವಲನವನ್ನ ಗಮನಿಸುತ್ತಿದ್ದ ದುಷ್ಕರ್ಮಿಗಳ ತಂಡ, ಪುತ್ತೂರಿನ ಮುಕ್ರಂಪಾಡಿಯಲ್ಲಿ ಎಂಬಲ್ಲಿ ಕಾರಿನಲ್ಲಿ ತಲ್ವಾರ್ ಸಹಿತ ಮನೋಜ್ ಮೇಲೆ ರಿವೆಂಜ್ ತಿರಿಸಿಕೊಳ್ಳಲು ಆಗಮಿಸಿದ್ದರು. ಈ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…