ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ.
ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ. ಅಕ್ಷಯ್ ದೇಹದ ಮೇಲಿನ ಗಾಯ ಕಂಡು ವೈದ್ಯರೇ ಶಾಕ್ ಆಗಿದ್ದಾರೆ. ಹಂತಕರು ಮನಸೋ ಇಚ್ಛೆ ಅಕ್ಷಯ್ ಮೇಲೆ ತಲವಾರು ಬೀಸಿದ್ದಾರೆ.ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪುತ್ತೂರಿನ ನೆಹರು ನಗರದ ಅಕ್ಷಯ್ ಮನೆಗೆ ಮೃತದೇಹ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…