Featured

ಪುತ್ತೂರು: ಅಡಿಕೆ ಅಂಗಡಿಯಿಂದ ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ – vishwanews24

ಪುತ್ತೂರು: ಅಡಿಕೆ ಅಂಗಡಿಯಿಂದ ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಪುತ್ತೂರು: ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ಖರೀದಿ ಕೇಂದ್ರಕ್ಕೆ ಹಾಡಹಗಲೇ ನುಗ್ಗಿ 5 ಲಕ್ಷ ರೂ. ನಗದು ಮತ್ತು ದಾಖಲೆಗಳು ಹಾಗೂ ಚೆಕ್‌ಗಳು ಇದ್ದ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಮೂಡಿಗೆರೆ ನಿವಾಸಿಗಳಾದ ಮುಹಮ್ಮದ್ ಶಹಬಾದ್ (26) ಮತ್ತು ಜಂಶೀದ್ (25) ಎಂದು ಗುರುತಿಸಲಾಗಿದೆ.

ಈ ಇಬ್ಬರನ್ನೂ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ಪೊಲೀಸರು ಅಂಗಡಿಯೊಂದರಿಂದ ಹಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಿದ್ದರು. ಅಲ್ಲಿ ನಡೆಸಿದ ವಿಚಾರಣೆ ವೇಳೆ, ಈ ಜೋಡಿ ಉಪ್ಪಿನಂಗಡಿ ಕಳ್ಳತನವನ್ನೂ ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದ್ದು, ನಂತರ ಉಪ್ಪಿನಂಗಡಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಘಟನೆ ಅಕ್ಟೋಬರ್ 27 ರಂದು ಗಾಂಧಿ ಪಾರ್ಕ್ ಸಮೀಪದ ಶ್ರೀರಾಮ ಗೋಪಾಲ್ ಕಾಮತ್ ವಾಣಿಜ್ಯ ಸಂಕೀರ್ಣದಲ್ಲಿರುವ ವಸಂತ್ ಎಂಬುವವರಿಗೆ ಸೇರಿದ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ವ್ಯಾಪಾರ ಕೇಂದ್ರದಲ್ಲಿ ನಡೆದಿತ್ತು. ಅಂದು ಮಧ್ಯಾಹ್ನ ಅಂಗಡಿ ಮಾಲೀಕರು ನಗದು ಡ್ರಾವರ್ ಅನ್ನು ಲಾಕ್ ಮಾಡಿ ಶಟರ್ ತೆರೆದೇ ಶೌಚಾಲಯಕ್ಕೆ ಹೋಗಿದ್ದರು. ಅವರು ಹಿಂದಿರುಗಿ ಬಂದಾಗ, ನಗದು ಡ್ರಾವರ್ ಒಡೆದು 5 ಲಕ್ಷ ರೂ. ನಗದು ಕಳುವಾಗಿರುವುದು ಕಂಡುಬಂದಿತ್ತು. ಬಳಿಕ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಎನ್. ಆರ್. ಪುರ ಪೊಲೀಸರಿಂದ ಆರೋಪಿಗಳ ವಶಕ್ಕೆ ಪಡೆದ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ನಾಗರಾಜು ನೇತೃತ್ವದ ತಂಡವು, ಅವರನ್ನು ಉಪ್ಪಿನಂಗಡಿಗೆ ಕರೆತಂದು ಸ್ಥಳ ಪರಿಶೀಲನೆ ನಡೆಸಿ, ನಂತರ ಅಧಿಕೃತವಾಗಿ ಪ್ರಕರಣ ದಾಖಲಿಸಿಕೊಂಡಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

18 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

19 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

21 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

21 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

22 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

22 hours ago