ಪುತ್ತೂರು: ಬಿಜೆಪಿ ಮುಖಂಡನ ಪುತ್ರನ ಅತ್ಯಾಚಾರ ಆರೋಪ ಪ್ರಕರಣವನ್ನು ಖಂಡಿಸಿ ಹಾಗೂ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ ಪುತ್ತೂರು ವತಿಯಿಂದ ಬುಧವಾರ ಪುತ್ತೂರು ನಗರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಎಸ್ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮನೀಶ್ ಅಲಿ, ರಾಜಕೀಯಕ್ಕಾಗಿ ಹಿಂದುಗಳ ಮನಸ್ಸಿನಲ್ಲಿ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿರುವ ಸಂಘ ಪರಿವಾರದ ಹಿಂದು ನಾವೆಲ್ಲ ಒಂದು ಎಂಬ ಸ್ಲೋಗನ್ ವೇದಿಕೆಯ ರಾಜಕೀಯಕ್ಕೆ ಸೀಮಿತವಾಗಿದೆ. ಓರ್ವ ತಾಯಿಗೆ ನ್ಯಾಯ ನೀಡಲು ಸಾಧ್ಯವಾಗದ ಈ ಮುಖಂಡರ ಅಸಲಿಯತು ಈಗ ಗೊತ್ತಾಗಿದೆ. ಇವರಿಂದ ಇಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿಲ್ಲ ಎಂದು ಆರೋಪಿಸಿದರು. ಹಿಂದುತ್ವವಾದಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇವತ್ತು ಯಾವ ಮಂಚದ ಅಡಿಯಲ್ಲಿ ಮಲಗಿದ್ದಾರೆ? ಇದೇ ಊರಿನ ಶೋಭಾ ಕರಂದ್ಲಾಜೆ ಎಲ್ಲಿದ್ದಾರೆ? ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಸಂಜೀವ ಮಠಂದೂರು ಅವರು ಯಾಕೆ ಸಂತ್ರೆಸ್ತೆಯ ಬೆನ್ನಿಗೆ ನಿಂತಿಲ್ಲ ಎಂದು ಪ್ರಶ್ನಿಸಿದರು.
ಸಂತ್ರಸ್ತೆಯ ತಾಯಿ ಮಾತನಾಡಿ, ನಾನು ಎಲ್ಲಾ ಸಮುದಾಯದ ಬಳಿಗೂ ಹೋಗಿದ್ದೇನೆ. ಎಲ್ಲರೂ ಮಗುವನ್ನು ತೆಗೆಸಿ ಎಂದು ಹೇಳಿದ್ದಾರೆ ಹೊರತು ಮದುವೆ ಮಾಡಿ ಕೊಡಬೇಕೆಂದು ಯಾರು ಹೇಳಿಲ್ಲ. ಹುಡುಗನ ಅಪ್ಪನಲ್ಲಿ ಮಾತನಾಡಿದಾಗ ಅವರು ನಿಮ್ಮ ಮಗು ಬೇರೆ ಅಲ್ಲ ನನ್ನ ಮಗು ಬೇರೆ ಅಲ್ಲ ಮದುವೆ ಮಾಡಿಸುತ್ತೇನೆ ಎಂದು ಹೇಳಿದ್ದರು. ಇದೀಗ ಹುಡುಗನನ್ನು ಅವರ ಅಪ್ಪನೇ ಅಡಗಿಸಿಟ್ಡಿದ್ದಾರೆ. ನನಗೆ ನ್ಯಾಯ ಸಿಗದಾಗ ನಾನು ನನ್ನ ಮಗುವಿಗೆ ನ್ಯಾಯಕ್ಕಾಗಿ ಬೇಕಾದ ಸಂಘಟನೆಯಲ್ಲಿ ಕೇಳಿಕೊಂಡಿದ್ದೇನೆ ಎಂದರು. ಪ್ರತಿಭಟನೆಯಲ್ಲಿ SDPI ಜಿಲ್ಲಾ ಸದಸ್ಯೆ ಝೀನತ್ ಬಂಟ್ವಾಳ, SDPI ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಅಶ್ರಪ್ ಬಾವು, ತಾಜುದ್ದಿನ್ ಸಾಲ್ಮರ ಮಾತನಾಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…