Featured

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ – vishwanews24

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವುದಾಗಿ ಆರೋಪಿ ಪರ ವಕೀಲರು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಜೂನ್ 19ರಂದು ಮಧ್ಯಸ್ಥಿಕಾ ಕೇಂದ್ರಕ್ಕೆ ಹಾಜರಾಗುವಂತೆ ಸಂತ್ರಸ್ತೆ ಹಾಗೂ ಆರೋಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಇದನ್ನೂ ಓದಿ :

ಅರ್ಜಿದಾರರ ಪರ ಹಿರಿಯ ವಕೀಲರ ಪಿ.ಪಿ. ಹೆಗ್ಡೆ ಅವರು, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾವನ್ನು ನ್ಯಾಯಾಲಯಕ್ಕೆ ತಿಳಿಸಿದರು.

ಅದರಂತೆ, ಜೂನ್ 19ರಂದು ಪ್ರಕರಣದ ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟವರು ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಲು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿತು.

ಇದಕ್ಕೂ ಮೊದಲು, ಹೈಕೋರ್ಟ್‌ನಲ್ಲಿ ಠೇವಣಿ ಇಡಲಾದ ಸಂತ್ರಸ್ತೆಗೆ ನೀಡಬೇಕಾದ ಮೊದಲ ತಿಂಗಳ ಜೀವನಾಂಶ ಪರಿಹಾರ ಮೊತ್ತ 75 ಸಾವಿರ ರೂ.ಗಳನ್ನು ಸಂತ್ರಸ್ತೆಗೆ ಪಾವತಿಸಲು ಸೂಚಿಸಿತು. 2ನೇ ತಿಂಗಳ ಪರಿಹಾರ ಮೊತ್ತ 75 ಸಾವಿರ ರೂ.ಗಳನ್ನು 4 ದಿನಗಳಲ್ಲಿ ಪಾವತಿಸಲು ಆರೋಪಿ ಕೃಷ್ಣರಾವ್‌ಗೆ ನ್ಯಾಯಪೀಠ ಸೂಚಿಸಿತು.

ಇದನ್ನೂ ಓದಿ :

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

3 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

3 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

3 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

3 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

3 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

4 hours ago