Featured

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಯುವತಿ ಜೊತೆ ಎಂಟು ವರ್ಷಗಳಿಂದ ಸಂಪರ್ಕದಲ್ಲಿದ್ದ ಕೃಷ್ಣ ರಾವ್, ಕೊನೆಗೆ ವಿವಾಹವಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾನೆ. ಆತನ ಮನೆಯವರೂ ಈಗ ಅವರ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ. ಇವರಿಬ್ಬರನ್ನು ಒಂದುಗೂಡಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಹಿಂದುತ್ವ ಸಂಘಟನೆಗಳು, ಸ್ವಯಂಘೋಷಿತ ಮುಖಂಡರು ಕೈಚೆಲ್ಲುತ್ತಿರುವುದು ಸರಿಯಲ್ಲ. ಸಂತ್ರಸ್ತೆಯನ್ನು ಸಮುದಾಯ ಸಂಘಟನೆಯವರು ಕೈಬಿಟ್ಟಿದ್ದಾರೆ. ಹಾಗಿರುವಾಗ ಕೇವಲ ಸಮುದಾಯದ ಮುಖಂಡ ನಂಜುಂಡಿ ಮಾತ್ರ ಧೈರ್ಯ ತುಂಬಿ ಬೆಂಬಲಕ್ಕೆ ನಿಂತಿದ್ದಾರೆ. ಈ ಘಟನೆಯಲ್ಲಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರತಿಭಾ ಕುಳಾಯಿ ಆಗ್ರಹಿಸಿದರು.

ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಹಿಂದೂಗಳು ಹತ್ತು ಹತ್ತು ಮಕ್ಕಳನ್ನು ಹೆರುವಂತೆ ಭಾಷಣ ಮಾಡುವ ಹಿಂದುತ್ವ ಮುಖಂಡರು ಇದೀಗ ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಮಗು ಕರುಣಿಸಿದ ಪ್ರಕರಣದಲ್ಲಿ ಮಾತನಾಡುತ್ತಿಲ್ಲ. ಅನ್ಯಾಯಕ್ಕೊಳಗಾದ ಯುವತಿಗೆ ನ್ಯಾಯ ದೊರಕಿಸುತ್ತಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಾ ಕುಳಾಯಿ, ಯಾವುದೇ ತಪ್ಪು ಮಾಡದ ಆ ಮಗುವಿನ ಭವಿಷ್ಯದ ಬಗ್ಗೆ ಆಲೋಚಿಸಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆಯ ತಾಯಿ ನಮಿತಾ, ಸಮುದಾಯದ ಕಾರ್ಯಕರ್ತೆ ಅರ್ಚನಾ ಉಪಸ್ಥಿತರಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

19 minutes ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

39 minutes ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

45 minutes ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

60 minutes ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

3 hours ago