ಪುತ್ತೂರು : ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ.
ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ ಡಿಕ್ಕಿ ಹೊಡೆದಿದೆ.
ಸವಾರ ಚೇತನ್ ಕುಮಾರ್ ಬೈಕ್ ಓಡಿಸುತ್ತಿದ್ದ ಸಹ ಸವಾರ (10) ಮನೀಶ್ ಸಹ ಸವಾರರಾಗಿ ಕುಳಿತುಕೊಂಡಿದ್ದ. ಡಿಕ್ಕಿಯ ರಭಸಕ್ಕೆ ಇಬ್ಬರೂ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಚೇತನ್ ಅವರಿಗೆ ತೀವ್ರ ಗಾಯಗಳಾಗಿದ್ದು, ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಮೃತಪಟ್ಟಿದ್ದಾರೆ. ಮನೀಶ್ ಕೂಡ ಗಾಯಗೊಂಡಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿ ಆಟೋ ರಿಕ್ಷಾ ಚಾಲಕ ಮೊಹಮ್ಮದ್ ತೌಫಿಕ್ ಕೂಡ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ. 18/2025, ಭಾರತೀಯ ದಂಡ ಸಂಹಿತೆಯ 281, 125(a), ಮತ್ತು 106B ಪ್ರಕರಣ ದಾಖಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…