Featured

ಪುತ್ತೂರು : ಆಟೋ ರಿಕ್ಷಾ ಬೈಕ್ ನಡುವೆ ಭೀಕರ  ಅಪಘಾತ ; ಬೈಕ್ ಸವಾರ ಸಾವು, ಇಬ್ಬರಿಗೆ ಗಾಯ – vishwanews24

ಪುತ್ತೂರು : ಭೀಕರ ರಸ್ತೆ ಅಪಘಾತ   – ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಬೈಕ್ ಸವಾರ ಸಾವು, ಇಬ್ಬರಿಗೆ ಗಾಯ

ಪುತ್ತೂರು : ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ.

ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್  ಡಿಕ್ಕಿ ಹೊಡೆದಿದೆ.

ಸವಾರ ಚೇತನ್ ಕುಮಾರ್ ಬೈಕ್‌ ಓಡಿಸುತ್ತಿದ್ದ ಸಹ ಸವಾರ (10) ಮನೀಶ್‌ ಸಹ ಸವಾರರಾಗಿ ಕುಳಿತುಕೊಂಡಿದ್ದ. ಡಿಕ್ಕಿಯ ರಭಸಕ್ಕೆ ಇಬ್ಬರೂ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಚೇತನ್ ಅವರಿಗೆ ತೀವ್ರ ಗಾಯಗಳಾಗಿದ್ದು, ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಮೃತಪಟ್ಟಿದ್ದಾರೆ. ಮನೀಶ್ ಕೂಡ ಗಾಯಗೊಂಡಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿ ಆಟೋ ರಿಕ್ಷಾ ಚಾಲಕ ಮೊಹಮ್ಮದ್ ತೌಫಿಕ್ ಕೂಡ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ. 18/2025, ಭಾರತೀಯ ದಂಡ ಸಂಹಿತೆಯ 281, 125(a), ಮತ್ತು 106B ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

22 seconds ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

5 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

12 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

18 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 hours ago