ಪುತ್ತೂರು : ಆನ್‌ಲೈನ್ ತರಗತಿ ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್ ಸಮಸ್ಯೆ ಉಂಟಾಗಿ ಶಿಕ್ಷಣ ಪಡೆಯಲು ಪರದಾಡುವಂತಾಗಿದೆ. ನೆಟ್‌ವರ್ಕ್ ಸಮಸ್ಯೆಯಿಂದ ಉಂಟಾದ ಕಾರಣದಿಂದಾಗಿ ಆನ್‌ಲೈನ್ ತರಗತಿಗಾಗಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂಬಲ್ಲಿನ ವಿದ್ಯಾರ್ಥಿಗಳು ಬಸ್ ನಿಲ್ದಾಣವನ್ನೇ ಕ್ಲಾಸ್ ರೂಂ ಅನ್ನಾಗಿಸಿದ್ದಾರೆ.
ಕೊರೊನಾ ಕಾರಣದಿಂದಾಗಿ ಶಾಲೆಗಳು ಮುಚ್ಚಲ್ಪಟ್ಟ ಬಳಿಕ ಆನ್‌ಲೈನ್ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ನೆಟ್‌ವರ್ಕ್‌ನದ್ದೆ ದೊಡ್ಡ ಸಮಸ್ಯೆ ಉಂಟಾಗಿದೆ. ನೆಟ್‌ವರ್ಕ್ ಸಮಸ್ಯೆಯಿಂದ ಆನ್‌ಲೈನ್ ತರಗತಿಗಳನ್ನು ಹಾಜರಾಗುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂಬಲ್ಲಿನ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲೇ ಆನ್‌ಲೈನ್ ತರಗತಿಯನ್ನು ಪಡೆಯುತ್ತಿದ್ದಾರೆ.
ಇಲ್ಲಿನ ಹತ್ತಾರು ವಿದ್ಯಾರ್ಥಿಗಳು ಬೆಳಿಗ್ಗೆ ಎದ್ದು ಆನ್‌ಲೈನ್ ತರಗತಿಗೆ ಹಾಜರಾಗಲು ಇಲ್ಲಿನ ಬಸ್ ನಿಲ್ದಾಣಕ್ಕೆ ಬರುತ್ತಾರೆ. ಇನ್ನು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತರಗತಿ ಇರುವ ಕಾರಣದಿಂದ ಕುಳಿತುಕೊಳ್ಳಲು ಕುರ್ಚಿಗಳನ್ನೂ ಹೊತ್ತೊಯ್ಯುತ್ತಾರೆ.
ಮೊಬೈಲ್ ನೆಟ್‌ವರ್ಕ್‌ಗಾಗಿ ತಮ್ಮ ನಿವಾಸಗಳಿಂದ ಕಾಡಿನ ಹಾದಿಯಲ್ಲಿ ಒಂದು, ಎರಡು ಕಿಲೋಮೀಟರ್ ದೂರ ಬಂದು ಬಸ್ ನಿಲ್ದಾಣದಲ್ಲಿ ಆನ್‌ಲೈನ್ ತರಗತಿಗೆ ಹಾಜರಾಗುವ ಈ ವಿದ್ಯಾರ್ಥಿಗಳು ತರಗತಿ ಮುಗಿದ ಬಳಿಕ ಮನೆಗೆ ಮರಳುತ್ತಾರೆ.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಾಗಿ ಇರದ ಕಾರಣದಿಂದಾಗಿ ಈ ವಿದ್ಯಾರ್ಥಿಗಳ ಆನ್‌ಲೈನ್ ತರಗತಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…