Featured

ಪುತ್ತೂರು : ಆರೋಗ್ಯ ಸಮಸ್ಯೆ ; ಮನನೊಂದಿದ್ದ ಯುವತಿ ಆತ್ಮಹತ್ಯೆ – vishwanews24

ಪುತ್ತೂರು : ಆರೋಗ್ಯ ಸಮಸ್ಯೆ ; ಮನನೊಂದಿದ್ದ ಯುವತಿ ಆತ್ಮಹತ್ಯೆ

ಮಂಗಳೂರು: 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.

ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪರವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ ಇದ್ದರು ಎನ್ನಲಾಗಿದೆ.

ಬೆಳಿಗ್ಗೆ ತಾನು ಕೆಲಸದ ನಿಮಿತ್ತ ಮತ್ತು ತಂಗಿಗೆ ಔಷಧಿಯನ್ನು ತರಲೆಂದು ಅಕ್ಕ ಮಂಗಳೂರಿಗೆ ಹೊರಟ್ಟಿದ್ದಾಗ ನೀತಾ ಈ ಕೃತ್ಯ ಮಾಡಿದ್ದಾಳೆ ಎನ್ನಲಾಗಿದೆ. ಸಂಜೆ ಅಕ್ಕ ಮನೆಗೆ ಬಂದಾಗ ತಂಗಿ ಶಾಲಿನ ಒಂದು ತುದಿಯನ್ನು ಕಿಟಕಿಯ ಸರಳಿಗೆ ಕಟ್ಟಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೃತ ನೀತಾ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 2016ರ ನಂತರ ಆಕೆಗೆ ತಲೆನೋವು ಆರಂಭವಾಗಿ ಚಿಕಿತ್ಸೆ ಪಡೆಯುತ್ತಿದ್ದರು. 2020ರ ನಂತರ ಕುತ್ತಿಗೆ, ಬೆನ್ನುಹುರಿ ಮತ್ತು ತಲೆಯಲ್ಲಿ ನರ ದೋಷ ಉಂಟಾದ ಕಾರಣ ಮಂಗಳೂರಿನ ಖಾಸಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಡೆಸಿ ಬಳಿಕ ಮಣಿಪಾಲ ಕೆಎಂಸಿ ಮತ್ತು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಳು. ಆದ್ರೆ ಆರೋಗ್ಯ ತೊಂದರೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿಕೊಂಡಿರಬಹುದು ಎಂದು ಅಕ್ಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

14 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

32 minutes ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

44 minutes ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

1 hour ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

1 hour ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago