ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. “ಈ ದೇವಸ್ಥಾನವೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದೂ , ಈ ದೇವಳಕ್ಕೆ ಸಂಬಂಧಪಟ್ಟ ಜಾಗದಲ್ಲಿ ಹಿಂದೂ ಭಕ್ತಾದಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಇರುತ್ತಾದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಲ್ಲದೇ ಹಿಂದೂ ಭಕ್ತಾದಿಗಳ ಹೊರತು ಪಡಿಸಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವುದನ್ನು ಕಡ್ಡಾಯವಾಗಿ ನಿಷೇದಿಸಿದೆ ಹಾಗೂ ಇತರರು ಪಾರ್ಕಿಂಗ್ ಮಾಡಿ ಹೋದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ದೇವಳದ ಹೊರಗಿನ ಪಂಚಾಕ್ಷರಿ ಮಂಟಪದಲ್ಲಿ ಸಾರ್ವಜನಿಕ ತಿಳುವಳಿಕೆಗಾಗಿ ಪ್ಲೆಕ್ಸ್ ಬೋರ್ಡ್’ನಲ್ಲಿ ಈ ಪ್ರಕಟಣೆಯನ್ನು ಹಾಕಲಾಗಿದೆ
ಹಲವು ವರ್ಷಗಳ ಹಿಂದೂ ಸಂಘಟನೆಗಳ ಬೇಡಿಕೆ : ಬಜರಂಗ ದಳ , ಹಿಂದೂ ಜಾಗರಣೆ ವೇದಿಕೆ ಹಲವು ಹಿಂದೂ ಪರ ಸಂಘಟನೆಗಳು ಹಾಗೂ ಮುಖಂಡರು ದೇವಲಾಯಕ್ಕೆ ಸೇರಿದ ಗದ್ದೆಯಲ್ಲಿ ಅನ್ಯ ಧರ್ಮಿಯರ ವಾಹನ ನಿಲುಗಡೆಗೆ ಅವಕಾಶ ನೀಡಬಾರದು ಎಂದು ಹಕ್ಕೊತ್ತಾಯ ಮಾಡಿದ್ದರು. ದೇವಳದ ಗದ್ದೆಯಲ್ಲಿ ಸರ್ಕಸ್ ಇತ್ಯಾದಿ ಮನೋರಂಜನಾ ಕಾರ್ಯಕ್ರಮಗಳಿಗೂ ಅವಕಾಶ ನೀಡಬಾರದು ಎಂಬ ಬೇಡಿಕೆಯನ್ನೂ ಈ ಸಂಘಟನೆಗಳು ಇಟ್ಟಿದ್ದವು. ಇದೀಗ ಇದರಲ್ಲಿ ಒಂದು ಬೇಡಿಕೆ ಹಲವು ವರ್ಷಗಳ ಬಳಿಕ ಈಡೇರಿದಂತಾಗಿದೆ.
ಇದೀಗ ಹಿಂದೂ ಭಕ್ತಾಧಿಗಳ ವಾಹನ ನಿಲುಗಡೆಗೆ ಅವಕಾಶ ನೀಡಿ ಉಳಿದವರ ವಾಹನಗಳಿಗೆ ಅವಕಾಶ ನಿರಾಕರಿಸುವ ಮೂಲಕ ವ್ಯವಸ್ಥಾಪನ ಸಮಿತಿಯೂ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…