Featured

ಪುತ್ತೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವಳದ ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ -Vishwanews24

ಪುತ್ತೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವಳದ ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ -Vishwanews24

ಇತರರು ವಾಹನ ಪಾರ್ಕ್ ಮಾಡಿದರೆ ಕಾನೂನು ರೀತಿಯ ಕ್ರಮದ ಎಚ್ಚರಿಕೆ ..

ವ್ಯವಸ್ಥಾಪನ ಸಮಿತಿಯ ಮಹತ್ವದ ನಿರ್ಧಾರ..

ಹಲವು ವರ್ಷಗಳ ಬಳಿಕ ಈಡೇರಿದ ಹಿಂದೂ ಸಂಘಟನೆಗಳ ಬೇಡಿಕೆ

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. “ಈ ದೇವಸ್ಥಾನವೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದೂ , ಈ ದೇವಳಕ್ಕೆ ಸಂಬಂಧಪಟ್ಟ ಜಾಗದಲ್ಲಿ ಹಿಂದೂ ಭಕ್ತಾದಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಇರುತ್ತಾದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಲ್ಲದೇ ಹಿಂದೂ ಭಕ್ತಾದಿಗಳ ಹೊರತು ಪಡಿಸಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವುದನ್ನು ಕಡ್ಡಾಯವಾಗಿ ನಿಷೇದಿಸಿದೆ ಹಾಗೂ ಇತರರು ಪಾರ್ಕಿಂಗ್ ಮಾಡಿ ಹೋದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ದೇವಳದ ಹೊರಗಿನ ಪಂಚಾಕ್ಷರಿ ಮಂಟಪದಲ್ಲಿ ಸಾರ್ವಜನಿಕ ತಿಳುವಳಿಕೆಗಾಗಿ ಪ್ಲೆಕ್ಸ್ ಬೋರ್ಡ್’ನಲ್ಲಿ ಈ ಪ್ರಕಟಣೆಯನ್ನು ಹಾಕಲಾಗಿದೆ

ಹಲವು ವರ್ಷಗಳ ಹಿಂದೂ ಸಂಘಟನೆಗಳ ಬೇಡಿಕೆ :      ಬಜರಂಗ ದಳ , ಹಿಂದೂ ಜಾಗರಣೆ ವೇದಿಕೆ ಹಲವು ಹಿಂದೂ ಪರ ಸಂಘಟನೆಗಳು ಹಾಗೂ ಮುಖಂಡರು ದೇವಲಾಯಕ್ಕೆ ಸೇರಿದ ಗದ್ದೆಯಲ್ಲಿ ಅನ್ಯ ಧರ್ಮಿಯರ ವಾಹನ ನಿಲುಗಡೆಗೆ ಅವಕಾಶ ನೀಡಬಾರದು ಎಂದು ಹಕ್ಕೊತ್ತಾಯ ಮಾಡಿದ್ದರು. ದೇವಳದ ಗದ್ದೆಯಲ್ಲಿ ಸರ್ಕಸ್ ಇತ್ಯಾದಿ ಮನೋರಂಜನಾ ಕಾರ್ಯಕ್ರಮಗಳಿಗೂ ಅವಕಾಶ ನೀಡಬಾರದು ಎಂಬ ಬೇಡಿಕೆಯನ್ನೂ ಈ ಸಂಘಟನೆಗಳು ಇಟ್ಟಿದ್ದವು. ಇದೀಗ ಇದರಲ್ಲಿ ಒಂದು ಬೇಡಿಕೆ ಹಲವು ವರ್ಷಗಳ ಬಳಿಕ ಈಡೇರಿದಂತಾಗಿದೆ.

ಇದೀಗ ಹಿಂದೂ ಭಕ್ತಾಧಿಗಳ ವಾಹನ ನಿಲುಗಡೆಗೆ ಅವಕಾಶ ನೀಡಿ ಉಳಿದವರ ವಾಹನಗಳಿಗೆ ಅವಕಾಶ ನಿರಾಕರಿಸುವ ಮೂಲಕ ವ್ಯವಸ್ಥಾಪನ ಸಮಿತಿಯೂ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

Vishwa News 24

Recent Posts

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

5 minutes ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

18 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

18 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

19 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

19 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

23 hours ago