Featured

ಪುತ್ತೂರು: ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ : ನಳಿನ್ ಕುಮಾರ್ ಕಟೀಲ್ – Vishwanews24

ಪುತ್ತೂರು: ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ : ನಳಿನ್ ಕುಮಾರ್ ಕಟೀಲ್

ಪುತ್ತೂರು: ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದರು. ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.

ರಾಜ್ಯದ ಕೆಲವು ಕಡೆಯಲ್ಲಿ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಎರಡು ಕಡೆಗಳಲ್ಲಿ ಇಂದು ನಾಮಪತ್ರ ಸಲ್ಲಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸಲಿದೆ. ಪುತ್ತೂರಿನ ಬಿಜೆಪಿ ಬಂಡಾಯದ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು ಅರುಣ್ ಕುಮಾರ್ ಪುತ್ತಿಲ ಮೇಲೆ ಅಪಾರ ಗೌರವವಿದೆ.

ಸಂಘಟನೆಯಲ್ಲಿ ಗುರುತಿಸಿ,ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದೆ. ಆ ಮೂಲಕ ಸ್ಪರ್ಧಿಸಿದ್ದು, ಬಿಜೆಪಿ ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಲಿದೆ ಎಂದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

6 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

15 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

15 hours ago