Featured

ಪುತ್ತೂರು : ಈ ಬಾರಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ ಬೀಳುವ ಸಾಧ್ಯತೆಯಿದೆ : ಮಹೇಶ್ ಶೆಟ್ಟಿ ತಿಮರೋಡಿ – Vishwanews24

ಪುತ್ತೂರು : ಸೌಜನ್ಯ ಹೋರಾಟದ ಮುಂದಿನ ಭಾಗವಾಗಿ ಈ ಬಾರಿ ನೋಟಾ ಅಭಿಯಾನ ..

ನೋಟಾ ಮತವನ್ನು ಅತೀ ಹೆಚ್ಚು ಚಲಾಯಿಸುವ ಮೂಲಕ ನಮಗೆ ನ್ಯಾಯ ಪಡೆದುಕೊಳ್ಳುತ್ತೇವೆ..

ಬಿಜೆಪಿ ಹಿಂದೂಗಳ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ..

ಪುತ್ತೂರು : ಸೌಜನ್ಯ ಸಾವಿಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈ ಹಿನ್ನಲೆ ಈಗಾಗಲೇ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ ಬೀಳುವ ಸಾಧ್ಯತೆಯಿದೆ ಎಂದು ಸೌಜನ್ಯ ಪರ ಹೋರಾಟ ಸಮಿತಿ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು ನೋಟಾ ಹೆಸರಿನಲ್ಲಿ ಹಿಂದುತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧ್ಯಾರ್ಥಿನಿ ಸೌಜನ್ಯ ಸಾವಿಗೆ ನಮಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈಗಾಗಲೇ ಈ ಕುರಿತು ರಾಜ್ಯದಾದ್ಯಂತ ನಿರಂತರ ಹೋರಾಟಗಳನ್ನು ನಡೆಸುತ್ತಿದ್ದೇವೆ, ಈ ಹೋರಾಟದ ಮುಂದಿನ ಭಾಗವಾಗಿ ಈ ಬಾರಿ ನೋಟಾ ಅಭಿಯಾನವನ್ನು ಆರಂಭಿಸಿದ್ದೇವೆ ಎಂದರು.

ಈಗಾಗಲೇ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನೋಟಾ ಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ನೋಟಾ ಮತವನ್ನು ಅತೀ ಹೆಚ್ಚು ಚಲಾಯಿಸುವ ಮೂಲಕ ನಮಗೆ ನ್ಯಾಯ ಪಡೆದುಕೊಳ್ಳುತ್ತೇವೆ. ಎಲ್ಲಿ ಹೆಚ್ಚು ನೋಟಾ‌ ಮತ ಚಲಾವಣೆಯಾಗುತ್ತೋ ಆ ಕ್ಷೇತ್ರ ದೇಶದ ಗಮನ ಸೆಳೆಯುತ್ತೆ. ಸಮಸ್ಯೆಗೆ ಪರಿಹಾರವೂ ದೊರೆಯುತ್ತದೆ ಎನ್ನುವ ವಿಶ್ವಾಸವೂ ಎಂದರು. ಈ ಬಾರಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ ಬೀಳುವ ಸಾಧ್ಯತೆಯಿದೆ ಎಂದರು. ಅಲ್ಲದೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಹಿಂದೂ ಮುಖಂಡರನ್ನು ಮುಗಿಸುವ ಕೆಲಸ ನಡೆಯುತ್ತಿದೆ. ಬಿಜೆಪಿ ಹಿಂದೂಗಳ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಮಹೇಶ್ ತಿಮರೋಡಿ ಆರೋಪಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

5 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

6 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

6 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

7 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

7 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago