ಪುತ್ತೂರು: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದ್ದು, ತೀವ್ರ ಕುತೂಹಲ ಮೂಡಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಮಿ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರ ಆಪ್ತರಾಗಿ ಗುರುತಿಸಿಕೊಂಡಿದ್ದ ಅಶೋಕ್ ಕುಮಾರ್ ರೈ ಬಿಜೆಪಿಯಲ್ಲಿದ್ದರು. ಇತ್ತೀಚೆಗಷ್ಟೇ ಅವರು ಕಾಂಗ್ರೆಸ್ ಗೆ ಪಕ್ಷಾಂತರಗೊಂಡಿದ್ದರು.
ಪುತ್ತೂರು ತಾಲೂಕಿನ ಕೋಡಿಂಬಾಡಿ ನಿವಾಸಿಯಾಗಿರುವ ಇವರು ಉದ್ಯಮಿಯಾಗಿದ್ದು, ರೈ ಎಸ್ಟೇಟ್ ಮಾಲಕರಾಗಿದ್ದಾರೆ.
ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ಮೂಲಕ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು, ಮುಖ್ಯವಾಗಿ ಮನೆ, ರಸ್ತೆ, ಸ್ವ ಉದ್ಯೋಗ ಇನ್ನಿತರ ನಿರ್ಮಾಣ ಕಾರ್ಯ ಗಳಿಗೆ ನೆರವು ನೀಡುತ್ತಾ ಬಂದವರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…