ಪುತ್ತೂರು: ಸೋಮವಾರ ಸಂಜೆ ನಿಧನರಾದ, ನಾಡಿನ ಹಿರಿಯ ರಾಜಕೀಯ ಮುಖಂಡ, ಕರಾವಳಿ ಬಿಜೆಪಿಯ ಭೀಷ್ಮ ಉರಿಮಜಲು ರಾಮ ಭಟ್ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಮಂಗಳವಾರ ನಡೆಯಿತು. ಮಂಗಳವಾರ ಬೆಳಗ್ಗೆ ಅಗಲಿದ ನಾಯಕನ ಪಾರ್ಥೀವ ಶರೀರ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ವಠಾರಕ್ಕೆ ತರಲಾಯಿತು. ಅಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.
ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ವಿಶ್ವ ಹಿಂದೂ ಪರಿಷತ್ ಮುಖಂಡ ಎಂ.ಬಿ. ಪುರಾಣಿಕ್, ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕರಾದ ವಸಂತ ಬಂಗೇರ, ಶಕುಂತಳಾ ಶೆಟ್ಟಿ, ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ ಸೇರಿದಂತೆ ನೂರಾರು ಮಂದಿ ಸಾಮಾಜಿಕ, ರಾಜಕೀಯ, ಧಾರ್ಮಿಕ ಶೈಕ್ಷಣಿಕ ರಂಗದ ಮುಖಂಡರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಮುಖಂಡರು ನಮನ ಸಲ್ಲಿಸಿದರು.
ಪುತ್ತೂರು, ಸುಳ್ಯ, ಮಂಗಳೂರು, ಕಾಸರಗೋಡು ಸೇರಿದಂತೆ ಕರಾವಳಿಯ ನಾನಾ ಭಾಗಗಳಿಂದ ಬಂದಿದ್ದ ಸಾರ್ವಜನಿಕರು, ಮುಖಂಡರು ಅಂತಿಮ ದರ್ಶನ ಪಡೆದರು. ಮಧ್ಯಾಹ್ನ ಪುತ್ತೂರು ನಗರದ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ಮಡಿವಾಳಕಟ್ಟೆ ಎಂಬಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಡೆಯಿತು. ೯೨ ವರ್ಷಗಳ ಕಾಲ ಸುದೀರ್ಘ ಜೀವನದಲ್ಲಿ ಸಾರ್ವಜನಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿ ಶುದ್ಧಹಸ್ತ, ಪ್ರಾಮಾಣಿಕ ನೇತಾರ, ಧೀಮಂತ ನಾಯಕ ಎಂಬ ಹೆಸರು ಗಳಿಸಿದ್ದ ಉರಿಮಜಲ್ ರಾಮ ಭಟ್ ಪಂಚಭೂತಗಳಲ್ಲಿ ಲೀನರಾದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…