ಪುತ್ತೂರು : ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಹಾಗು ಮೊಮ್ಮಗಳು ಎಂದು ಗುರುತಿಸಲಾಗಿದೆ.
ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಕಾರ್ಯಕ್ರಮವಿತ್ತು. ಇದರಲ್ಲಿ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಬಂದಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ವ್ಯಾಗನರ್ ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗುತಿದ್ದರು. ಈ ವೇಳೆ ಮುರ ಜಂಕ್ಷನ್ ಬಳಿ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಅಪಘಾತ ನಡೆದ ಕೂಡಲೇ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ, ನಜ್ಜುಗುಜ್ಜಾಗಿದ್ದ ಕಾರಿನಿಂದ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…