ಪುತ್ತೂರು : ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾಗಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆಯೊಂದಿಗೆ ತಲಾ 3 ಲಕ್ಷ ರೂ. ದಂಡವನ್ನೂ ವಿಧಿಸಿದೆ.
ಪ್ರೀತು ಅಲಿಯಾಸ್ ಪ್ರೀತೇಶ್ ಸುಲಾಯ ಹಾಗೂ ಕಿರಣ್ ಅಲಿಯಾಸ್ ಮಣಿ ಶಿಕ್ಷೆಗೆ ಒಳಗಾದ ಆರೋಪಿಗಳು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ 5 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಯ್ಕ್ ಅವರು ಪ್ರೀತು ಹಾಗೂ ಕಿರಣ್ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ. 341 ಐಪಿಸಿ ಅಡಿಯಲ್ಲಿ 3 ತಿಂಗಳು ಸದಾ ಶಿಕ್ಷೆ, 500 ದಂಡ, ವಿಧಿಸಿರುತ್ತಾರೆ. ದಂಡದ ಮೊತ್ತದಲ್ಲಿ 5.90 ಲಕ್ಷ ರೂ.ಗಳನ್ನು ಕಾರ್ತಿಕ್ ಮೇರ್ಲ ಅವರ ತಾಯಿ ಹೇಮಾವತಿ ಅವರಿಗೆ ನೀಡುವಂತೆ ನ್ಯಾಯಾಲಯ ಸೂಚಿಸಿದೆ.
ಇನ್ನು ಉಳಿದ ಆರೋಪಿಗಳ ಪೈಕಿ ಮಂಗಳೂರಿನ ಅತ್ತಾವರ ನಿವಾಸಿ ಸಂತು ಅಲಿಯಾಸ್ ಸ್ಟಿವನ್ ಮಾಂತೇರೋನನ್ನು ನೀರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದಲ್ಲಿ ಕಿರಣ್ ರೈ ಅವರ ಸಹೋದರ ಚರಣ್ ರಾಜ್ ರೈ ಕೂಡ ಆರೋಪಿಯಾಗಿದ್ದು, ವಿಚಾರಣೆ ಸಂದರ್ಭ ಜಾಮೀನಿನಲ್ಲಿದ್ದ ಅವರು 2022ರಲ್ಲಿ ಹತ್ಯೆಯಾಗಿದ್ದರು.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯ ಎಂಬಲ್ಲಿ 2019ರ ಸೆ. 3 ರಂದು ಕಾರ್ತಿಕ್ ಮೇರ್ಲ ಎಂಬ ಯುವಕನನ್ನು ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಅ. ಕ್ರ. 107/2019, ಕಲಂ: 504, 341, 302, 212 ಐಪಿಸಿ ಪ್ರಕರಣದ ತನಿಖೆ ನಡೆಸಿದ ಆಗಿನ ಪ್ರಕರಣದ ತನಿಖಾಧಿಕಾರಿಗಳು ಹಾಗೂ ಪೊಲೀಸ್ ನಿರೀಕ್ಷಕರಾಗಿದ್ದ ನಾಗೇಶ್ ಕದ್ರಿರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ, ಪ್ರೀತು ಅಲಿಯಾಸ್ ಪ್ರೀತೇಶ್ ಸುಲಾಯ, ಚರಣ್, ಕಿರಣ್ ಅಲಿಯಾಸ್ ಮಣಿ ಹಾಗೂ ಸಂತು ಅಲಿಯಾಸ್ ಸ್ಟಿವನ್ ಮಾಂತೇರೋ ಎಂಬುವವರುಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ ಬೆಂಗಳೂರು : ನಕಲಿ…
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…