Featured

ಪುತ್ತೂರು : ಕಾರ್ಯಕರ್ತರ ಬೆಂಬಲ ಇಲ್ಲದೆ ಜಿಲ್ಲೆಯಲ್ಲಿ ಯಾವುದೇ ಕೆಲಸ ಕಾರ್ಯ ಮಾಡಲು ಸಾಧ್ಯವಿಲ್ಲ : ಬ್ರಿಜೇಶ್ ಚೌಟ – Vishwanews24

ತುಳುನಾಡಿನ ದೈವ ದೇವರ ಆಶೀರ್ವಾದಿಂದ ಟಿಕೆಟ್ ಲಭಿಸಿದೆ,  ಹಿಂದುತ್ವದ ವಿಚಾರದಲ್ಲಿ ಸ್ಪಷ್ಟವಾಗಿದ್ದೇವೆ

ಪುತ್ತೂರು : ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ ಮಾಡಬೇಕೆಂಬ ಕಲ್ಪನೆಯನ್ನು ಕಾಂಗ್ರೆಸ್ ಇಟ್ಟುಕೊಂಡಿದೆ. ವ್ಯಕ್ತಿ ಮುಖ್ಯವಾಗಿರದೆ ಸಮಾಜದ ಕೆಲಸವನ್ನು ಒಗ್ಗಟ್ಟಿನಿಂದ ಮಾಡಬೇಕು. ಹಿಂದುತ್ವದ ವಿಚಾರಧಾರೆಯಲ್ಲಿ ಬದುಕು ನಡೆಸಿದರೆ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ. ಕಾರ್ಯಕರ್ತರ ಬೆಂಬಲ ಇಲ್ಲದೆ ಜಿಲ್ಲೆಯಲ್ಲಿ ಯಾವುದೇ ಕೆಲಸ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಷ್ ಚೌಟ ಹೇಳಿದರು. ಪುತ್ತೂರಿನ ಜೈನ ಭವನ ದಲ್ಲಿ ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ತುಳುನಾಡಿನ ದೈವ ದೇವರ ಆಶೀರ್ವಾದಿಂದ ಟಿಕೆಟ್ ಲಭಿಸಿದೆ. ಯಾವುದೇ ಭ್ರಮೆಯಲ್ಲಿ ಇರದೆ, ಹಿಂದುತ್ವದ ವಿಚಾರದಲ್ಲಿ ಸ್ಪಷ್ಟವಾಗಿದ್ದೇವೆ. ದಕ್ಷಿಣ ಕನ್ನಡ ದೇವರು ಪ್ರೀತಿಸುವ ಜಿಲ್ಲೆಯಾಗಿದ್ದು, ಇಲ್ಲಿನ ಜನರು ಸಾಮರ್ಥ್ಯವಂತರಾಗಿದ್ದಾರೆ. ಮುಂದಿನ 25ವರ್ಷ ಭಾರತದ ಅಮೃತ ಕಾಲವಾಗಿದ್ದು, ಜನರಿಗೆ ಸಾಧನೆಗಳಿಗೆ ವೇದಿಕೆ ನೀಡುವ ಕಾರ್ಯ ಮಾಡಲಾಗುವುದು. ಕಾರ್ಯಕರ್ತರನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಾಗುವುದು. ಕಾರ್ಯಕರ್ತರ ಚುನಾವಣೆಯಾಗಿದ್ದು, ಮೋದಿಗೆ ಶಕ್ತಿ ತುಂಬುವ ಕಾರ್ಯವಾಗಬೇಕು. ಕನಸಿನ ದಕ್ಷಿಣ ಕನ್ನಡ ನಿರ್ಮಾಣವನ್ನು ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರಬೇಕು ಎಂದರು.

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಚುನಾವಣೆಯ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಸಮರ್ಥ ಅಭ್ಯರ್ಥಿಯನ್ನು ಕ್ಷೇತ್ರಕ್ಕೆ ನೀಡಿದ್ದು, 4ಲಕ್ಷ ಮತದ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿದೆ. ಹತ್ತು ವರ್ಷದಿಂದ ಪಕ್ಷದ ಯೋಚನೆಗಳೊಂದಿಗೆ ದೇಶವನ್ನು ಮುನ್ನಡೆಸುವ ಕಾರ್ಯವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ. ಮುಂದೆಯೂ ಮೋದಿಯವರು ಹಿಂದುತ್ವದ ನೆಲೆಗಟ್ಟಿನಲ್ಲಿ ದೇಶವನ್ನು ಮುನ್ನಡೆಸುವಂತಾಗಬೇಕು. ದಿನದ ಮೂರು ಗಂಟೆ ಪಕ್ಷದ ಕೆಲಸಕ್ಕಾಗಿ ಇಡುವ ಮೂಲಕ ಕೇಂದ್ರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವಾಗಬೇಕು. ಮುಂದಿನ ವಿಧಾನ ಸಭಾ ಕ್ಷೇತ್ರ ಬಿಜೆಪಿಯದ್ದು ಎಂಬ ರೀತಿಯಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago