ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.ಅಪಘಾತದ ತೀವ್ರತೆಗೆ ಬೈಕ್ ಸವಾರ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply