Featured

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಇತ್ತೀಚಿನ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿ ಸಮಾಜಕ್ಕೆ ತಪ್ಪು ಸಂದೇಶವನ್ನು ನೀಡಿದ ಆರೋಪದ ಮೇಲೆ, ಪುತ್ತೂರು ನಗರ ಪೊಲೀಸರು ಏಳು ವೆಬ್ ನ್ಯೂಸ್ ಪೋರ್ಟಲ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪುತ್ತೂರು ಪುರುಷರಕಟ್ಟೆಯಲ್ಲಿ ಘಟನೆಯೊಂದು ನಡೆದಿತ್ತು. ಈ ಘಟನೆಯನ್ನು ವಾಸ್ತವಿಕವಾಗಿ ವರದಿ ಮಾಡುವ ಬದಲು, ಆರೋಪಿತ ಮಾಧ್ಯಮಗಳು ಕೋಮು ಬಣ್ಣ ಬಳಿದು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ವಿಭಜನೆ ಉಂಟುಮಾಡುವ ಪ್ರಯತ್ನ ಮಾಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೋಮು ಸೌಹಾರ್ದತೆಯನ್ನು ಕದಡಲು ಈ ವೇದಿಕೆಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಸಾರ್ವಜನಿಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 353(2) ಅಡಿಯಲ್ಲಿ ಪುತ್ತೂರು ಚಾವಡಿ (Instagram), ಹೊಸ ದಿಗಂತ, Zoomintv. online, News focuskannada. com, ಉದಯವಾಣಿ, Prakharanews. com ಮತ್ತು ಕರ್ನಾಟಕ ಪೋರ್ಟ್‌ಫೋಲಿಯೊ (Twitter/X) ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಹಾಗೂ ಕೋಮು ಪ್ರಚೋದನಾತ್ಮಕ ಸಂದೇಶಗಳನ್ನು ಪ್ರಸಾರ ಮಾಡುವವರ ವಿರುದ್ಧ ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

Vishwa News 24

Recent Posts

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

2 minutes ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

20 minutes ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

1 hour ago

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…

1 hour ago

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – vishwanews24

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…

1 hour ago

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ – vishwanews24

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…

2 hours ago