ಪುತ್ತೂರು : ಖಾಸಗಿ ನರ್ಸಿಂಗ್ ಹೋಮ್ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ದಾಖಲಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ” ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಸಾರ್ವಜನಿಕರನ್ನು ಪ್ರಚೋದಿಸುತ್ತೇಬೆ ಮತ್ತು ಜನರಿಗೆ ಹೇಳಿ ಹೊಡೆಸುತ್ತೇನೆ, ಈ ಆಸ್ಪತ್ರೆಗಳ ವಿರುದ್ಧ ಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. ಇಲ್ಲದಿದ್ದರೆ, ನಾನು ಸುಮ್ಮನಿರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಟೌನ್ ಪೊಲೀಸ್ ಠಾಣೆ ದೂರು ನೀಡಲಾಗಿದೆ.
ಖಾಸಗಿ ನರ್ಸಿಂಗ್ ಹೋಮ್ಗಳು ಸುಲಿಗೆ ನಡೆಸುವುದನ್ನು ನಿಲ್ಲಿಸದಿದ್ದರೆ ಜನರನ್ನು ಕಳಿಸಿ ಹೊಡೆಸುತ್ತೇವೆ ಎಂದು ಸಹ ಹೇಳಿದ್ದ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಈ ಬೆನ್ನಲ್ಲೇ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…