Featured

ಪುತ್ತೂರು : ಗಡಿಭದ್ರತಾ ಪಡೆಗೆ ಆಯ್ಕೆಯಾದ ಪುತ್ತೂರಿನ ಇಬ್ಬರು ಯುವತಿಯರು -Vishwanews24

ಪುತ್ತೂರು : ಗಡಿಭದ್ರತಾ ಪಡೆಗೆ ಆಯ್ಕೆಯಾದ ಪುತ್ತೂರಿನ ಯುವತಿಯರು -Vishwanews24

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅವಿಭಜಿತ ಪುತ್ತೂರು ತಾಲೂಕಿನ ಇಬ್ಬರು ತರುಣಿಯರು ದೇಶ ಸೇವೆಯ ಕಾರ್ಯಕ್ಕೆ ಮುಂದಾಗಿದ್ದು, ಗಡಿಭದ್ರತಾ ಪಡೆ (ಬಿಎಸ್‌ಎಫ್‌)ಗೆ ಆಯ್ಕೆಯಾಗಿದ್ದಾರೆ.

ಪುತ್ತೂರು ಹೊರವಲಯದ ಬಲ್ನಾಡಿನ ಪರಜಾಲ್‌ ದೇವಸ್ಯದ ರಮ್ಯಾ ಮತ್ತು ಕಡಬ ತಾಲೂಕು ವ್ಯಾಪ್ತಿಯ ಕಾಣಿಯೂರಿನ ಯೋಗಿತಾ ಅವರೇ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿರುವ ಧೀರ ವನಿತೆಯರು. ಇವರಿಬ್ಬರೂ ಏಪ್ರಿಲ್‌ 1ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ರಮ್ಯಾ ಅವರು ಬಲ್ನಾಡಿನ ಪದ್ಮಯ್ಯ ಗೌಡ ಮತ್ತು ತೇಜವತಿ ದಂಪತಿಗಳ ಪುತ್ರಿ. ಬಲ್ನಾಡ್‌ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಈಕೆ, ಪುತ್ತೂರು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಮತ್ತು ಪಿಯು ಶಿಕ್ಷಣ ಪಡೆದಿದ್ದು, ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಶಾಲಾ ದಿನಗಳಲ್ಲಿ ಎನ್‌ಸಿಸಿಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ರಮ್ಯಾ, ಇದೀಗ ಸೇನಾ ಕರ್ತವ್ಯಕ್ಕೆ ಹೊರಟು ನಿಂತಿದ್ದಾರೆ.

ಇದನ್ನೂ ಓದಿ : ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಕಾಣಿಯೂರು ಗ್ರಾಮದ ಮಲೆಕೆರ್ಚಿ ಮೇದಪ್ಪ ಗೌಡ ಮತ್ತು ದೇವಕಿ ದಂಪತಿಗಳ ಪುತ್ರಿಯಾದ ಯೋಗಿತಾ ಎಂ. ಬೊಬ್ಬೆಕೇರಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಕಾಣಿಯೂರಿನಲ್ಲಿ ಪ್ರೌಢಶಿಕ್ಷಣ, ನಿಂತಿಕಲ್‌ನಲ್ಲಿ ಪಿಯು ಶಿಕ್ಷಣ ಪಡೆದಿದ್ದಾರೆ. ಮಂಗಳೂರಿನ ವಿವಿ ಕಾಲೇಜಿನಲ್ಲಿ ಪದವಿ ಪಡೆದು, ಕೊಣಾಜೆಯ ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿದ್ದಾರೆ. ಮಾರ್ಚ್ 30ರಂದು ಕಾಣಿಯೂರಿನಲ್ಲಿ ಯೋಗಿತಾಳಿಗೆ ಗ್ರಾಮಸ್ಥರಿಂದ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ ನಡೆಯಲಿದೆ.

ಯುವತಿಯರಿಗೆ ಬಿ.ವೈ ವಿಜಯೇಂದ್ರ ಅಭಿನಂದನೆ ಸಲ್ಲಿಸಿದ್ದು, ಹೆಣ್ಣು ಅಬಲೆಯಲ್ಲ, ಆಕೆಯ ಸಾಮರ್ಥ್ಯಕ್ಕೆ ತಕ್ಕ ಪ್ರೋತ್ಸಾಹ ಮತ್ತು ಅವಕಾಶ ದೊರೆತಾಗ ಅಸಾಧ್ಯ ಯಾವುದೂ ಇಲ್ಲ. ನಮ್ಮ ದಕ್ಷಿಣ ಕನ್ನಡದ ಪುತ್ತೂರಿನ ಹೆಮ್ಮೆಯ ಪ್ರತಿಭೆಗಳಾದ ಕಾಣಿಯೂರಿನ ಕುಮಾರಿ ಯೋಗಿತಾ ಹಾಗೂ ಬಲ್ನಾಡಿನ ಕುಮಾರಿ ರಮ್ಯಾ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದು, ಸ್ತ್ರೀಶಕ್ತಿಗೆ ನಿದರ್ಶನವಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲು ಮಾಡಿಕೊಳ್ಳಬೇಕು : ಸಿದ್ದರಾಮಯ್ಯ ಆಗ್ರಹ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

7 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago