ಪುತ್ತೂರು: ಗಣೇಶೋತ್ಸವ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯು ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಠಾಣೆ ಎದುರಿನಲ್ಲೇ ಮಂಗಳವಾರ ತಡರಾತ್ರಿ ವೇಳೆ ನಡೆದಿದೆ.
ಕೊಲೆಗೀಡಾದವರನ್ನು ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಸುಮಾರು 11.30 ಗಂಟೆಗೆ ಕಾರ್ತಿಕ್ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಆರೋಪಿಗಳಾದ ಚರಣ್ ರಾಜ್, ಕಿರಣ್ ಮತ್ತು ವಾಹನ ಚಾಲಕ ಪ್ರೀತೇಶ್ ಚೂರಿಯಿಂದ ತಿವಿದಿದ್ದಾರೆ. ಕಾರ್ತಿಕ್ ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ಕಾರ್ತಿಕ್ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಸಾರ್ವಜನಿಕರು ಸೇರುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…