Featured

ಪುತ್ತೂರು : ಗ್ಯಾಂಗ್ ರೇಪ್ ಪ್ರಕರಣ : ಆರೋಪಿಗಳಿಗೆ ಜಾಮೀನು ಮಂಜೂರು -Vishwanews24

ಪುತ್ತೂರು : ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಯೊಬ್ಬಳ ಮೇಲೆ ಅದೇ ಕಾಲೇಜಿನ ಐವರು ವಿದ್ಯಾರ್ಥಿಗಳು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ಬಜತ್ತೂರು ಗ್ರಾಮದ ಗಾಣದಮೂಲೆ ನಿವಾಸಿ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್‌(19), ಪೆರ್ನೆ ರಾಜಶ್ರೀ ಕೃಪದ ನಾಗೇಶ್‌ ನಾಯ್ಕ್‌ ಎಂಬವರ ಪುತ್ರ ಪ್ರಜ್ವಲ್‌ (19), ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಕಾಂತಪ್ಪ ಗೌಡರವರ ಪುತ್ರ ಸುನಿಲ್‌(19), ಪೆರ್ನೆ ಕಡಂಬು ನಿವಾಸಿ ಸದಾಶಿವ ಎಂಬವರ ಪುತ್ರ ಕಿಶನ್‌ (19), ಹಾಗೂ ಬಂಟ್ವಾಳ ಬರಿಮಾರು ಗ್ರಾಮದ ಬಲ್ಯ ನಿವಾಸಿ ಸುಬ್ಬಣ್ಣ ಶೆಟ್ಟಿ ಎಂಬವರ ಪುತ್ರ ಪ್ರಖ್ಯಾತ್‌ (19)ಗೆ ಜಾಮೀನು ಮಂಜೂರಾಗಿದೆ. ಈ ಪೈಕಿ ಆರೋಪಿ ಪ್ರಜ್ವಲ್‌ಗೆ ರಾಜ್ಯ ಉಚ್ಛ ನ್ಯಾಯಾಲಯ ಈ ಹಿಂದೆಯೇ ಜಾಮೀನು ನೀಡಿತ್ತು.

ಆರೋಪಿಗಳಾದ ಕಿಶನ್‌ ಹಾಗೂ ಗುರುನಂದನ್‌ ಪರ ವಕೀಲ ಮಹೇಶ್‌ ಕಜೆ, ಸುನಿಲ್‌ ಪರ ರಾಜಶೇಖರ ಇಲ್ಯಾರ್‌, ಪ್ರಖ್ಯಾತ್‌ ಪರ ಅರುಣ್‌ ಶ್ಯಾಮ್‌ ವಾದ ಮಾಡಿದ್ದಾರೆ. ಹಾಗೆಯೇ ಈ ಹಿಂದೆ ಜಾಮೀನು ಪಡೆದು ಕೊಂಡಿದ್ದ ಪ್ರಜ್ವಲ್‌ ಪರ ಅರುಣ್‌ಶ್ಯಾಮ್‌ ಹಾಗೂ ಮಹೇಶ್‌ ಕಜೆ ವಾದಿಸಿದ್ದರು.

ಮಾರ್ಚ್ ತಿಂಗಳಲ್ಲಿ ಆರೋಪಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಮನೆಗೆ ತಲುಪಿಸುವುದಾಗಿ ನಂಬಿಸಿ ಕಾರಿನಲ್ಲಿ ಕರೆದು ಕೊಂಡು ಹೋಗಿ ಬೆಳ್ಳಿಪ್ಪಾಡಿಯ ಕಠಾರ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಗೆ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಷ್ಟು ಮಾತ್ರವಲ್ಲದೇ ಮೊಬೈಲ್‌ ಫೋನ್‌ನಲ್ಲಿ ಚಿತ್ರೀಕರಣ ಮಾಡಿದ್ದರು. ಈ ವಿಷಯವನ್ನು ಯಾರಿಗಾದರೂ ತಿಳಿಸಿದಂತೆ ಜೀವ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ ಚಾರ್ಚ್ ಶೀಟ್‌ ಸಲ್ಲಿಸಿದ್ದರು.

ಈ ಅತ್ಯಾಚಾರದ ವಿಡಿಯೋ ಜುಲೈ ತಿಂಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಸುಮೋಟೋ ಕೇಸು ದಾಖಲಿಸಲಾಗಿತ್ತು. ನಂತರ ಸಂತ್ರಸ್ಥ ವಿದ್ಯಾರ್ಥಿನಿ ನೀಡಿದ ದೂರಿನಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago