ಪುತ್ತೂರು : ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಯ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು.
ವಿದ್ಯಾರ್ಥಿನಿಯನ್ನು ಸಂಸ್ಥೆಯಿಂದ ವಜಾಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಪಿ ಎಂದು ಬಾಲಕನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ.
ಪುತ್ತೂರು ಕಾಲೇಜಿನ ವಿದ್ಯಾರ್ಥಿಗಳು ಸಭೆ ನಡೆಸಿದ್ದು, ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯು ಅದೇ ಕಾಲೇಜಿನ ವಿದ್ಯಾರ್ಥಿಯ ಮೇಲೆ ಸುಳ್ಳು ಆರೋಪ ಹೊರಿಸಿರುವುದನ್ನು ಖಂಡಿಸಿದರು. ಈ ಸಭೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತುಗೊಳಿಸಬೇಕು ಮತ್ತು ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ಆತನ ಹೆಸರನ್ನು ಕೆಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಡಿಸ್ಚಾರ್ಜ್ ಆಗಿದ್ದು, ಮನೆಗೆ ತೆರಳಿದ್ದಾಳೆ. ಬಾಲಕಿಯ ವಿಚಾರಣೆ ಬಳಿಕವಷ್ಟೇ ಸತ್ಯ ಹೊರಬೀಳಲಿದೆ. ವಿಚಾರಣೆ ಪೂರ್ಣಗೊಂಡ ನಂತರ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…