ದಕ್ಷಿಣ ಕನ್ನಡ

ಪುತ್ತೂರು : ಜಡ್ಜ್ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಆಸ್ಪತ್ರೆಗೆ ದಾಖಲು – vishwanews24

ಪುತ್ತೂರು : ಜಡ್ಜ್ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಆಸ್ಪತ್ರೆಗೆ ದಾಖಲು

ಪುತ್ತೂರು: ಜಡ್ಜ್ ಎದುರಲ್ಲೇ ವ್ಯಕ್ತಿಯೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಮಧ್ಯಾಹ್ನ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದವರನ್ನು ಪುತ್ತೂರು ತಾಲೂಕಿನ ಕಾವು ಮಾನ್ಯಡ್ಕ ನಿವಾಸಿ ರವಿ (35) ಎಂದು ಗುರುತಿಸಲಾಗಿದೆ.

ರವಿ ಮತ್ತು ಆತನ ಪತ್ನಿ ವಿದ್ಯಾಶ್ರೀ ನಡುವೆ ಕಳೆದ ಕೆಲ ದಿನಗಳಿಂದ ಕಲಹ ನಡೆಯುತ್ತಿತ್ತು. ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಗಂಡ–ಹೆಂಡತಿ ನಡುವಿನ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬುಧವಾರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಿಚ್ಛೇದನ ಸಂಬಂಧ ಮಾತುಕತೆ ಕೂಡ ನಡೆದಿತ್ತು. ಠಾಣೆಗೆ ಹಾಜರಾಗುವಂತೆ ಪೊಲೀಸರು ರವಿಗೆ ಸೂಚನೆ ನೀಡಿದ್ದರು.

ಈ ಮಧ್ಯೆ ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಆಗಮಿಸಿ, 5ನೇ ಹೆಚ್ಚುವರಿ ನ್ಯಾಯಾಲಯದ ಜಡ್ಜ್ ಎದುರಲ್ಲಿಯೇ ವಿಷ ಸೇವಿಸಿದ್ದಾನೆ. ರವಿ ವಿಷ ಸೇವಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಇದ್ದುದರಿಂದ ನ್ಯಾಯಾಧೀಶರು ಮುಂಚಿತವಾಗಿಯೇ ನ್ಯಾಯಾಲಯದ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದರು ಎಂದು ತಿಳಿದುಬಂದಿದೆ.

ವಿಷ ಸೇವಿಸಿದ ಬಳಿಕ ರವಿ ನ್ಯಾಯಾಲಯದ ಆವರಣದಲ್ಲೇ ವಾಂತಿ ಮಾಡಿದ್ದು, ತಕ್ಷಣ ಎಚ್ಚೆತ್ತ ಸಿಬ್ಬಂದಿ ಹಾಗೂ ಸಾರ್ವಜನಿಕರು ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಗೇರು ತೋಟದಲ್ಲಿ ಸಿಂಪಡಣೆಗೆ ಬಳಸುವ, ಎಂಡೋಸಲ್ಫಾನ್ ನಿಷೇಧದ ಬಳಿಕ ಮಾರುಕಟ್ಟೆಯಲ್ಲಿ ಲಭ್ಯವಿರುವ ‘ಕರಾಟೆ’ ಎಂಬ ಕೀಟನಾಶಕವನ್ನು ರವಿ ಸೇವಿಸಿದ್ದಾನೆ ಎನ್ನಲಾಗಿದೆ.

ಆತನ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತ್ಮಹತ್ಯೆ ಯತ್ನದ ಬಳಿಕ ದಂಪತಿ ಒಂದಾಗಿ, ಮಂಗಳೂರು ಆಸ್ಪತ್ರೆಗೆ ಸಾಗುವ ವೇಳೆ ಒಂದೇ ಆಂಬ್ಯುಲೆನ್ಸ್‌ನಲ್ಲಿ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

7 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

14 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

36 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago