ಪುತ್ತೂರು :ಕಿಲ್ಲರ್ ಡೆಂಗ್ಯೂ ದಕ್ಷಿಣ ಕನ್ನಡದ ನೆಲ್ಯಾಡಿ ಯಲ್ಲಿ ಮಹಿಳೆಯೊಬ್ಬಳನ್ನು ಬಲಿ ಪಡೆದಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35 )ಮೃತ ಮಹಿಳೆಯಾಗಿದ್ದಾಳೆ. ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದ ಲೀಲಾವತಿಗೆ ನಾಲ್ಕೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಆರಂಭದಲ್ಲಿ ಉದನೆಯ ಕ್ಲಿನಿಕ್‌ವೊಂದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಜ್ವರ ಹತೋಟಿಗೆ ಬಾರದೆ ಉಲ್ಬಣಿಸಿದ ಹಿನ್ನೆಲೆಯಲ್ಲಿ ಅಕ್ಟೋಬರ್ 25ರಂದು ರಾತ್ರಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಆ ನಂತರ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಲೀಲಾವತಿ ಸಾವನ್ನಪ್ಪಿದ್ದಾರೆ. ಮೃತ ಲೀಲಾವತಿ ಅವರು ಪತಿ ಬಾಬು, ಪುತ್ರ ಶಯನ್, ಪುತ್ರಿ ಸಾನ್ವಿ ಅವರನ್ನು ಅಗಲಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…