ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಏ.18ರಂದು ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳಿಪ್ಪಾಡಿ ಕೊಡಿಮರದ ವಿಶ್ವನಾಥ ಪೂಜಾರಿ ಅವರ ಮಗ ಧನರಾಜ್(21.ವ) ಮೃತಪಟ್ಟ ವ್ಯಕ್ತಿ.
ವ್ಯಕ್ತಿಯೋರ್ವ ಚಲಾಯಿಸುತ್ತಿದ್ದ ಬೈಕ್ ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ, ಸಹಸವಾರ ಸೇರಿದಂತೆ ಇಬ್ಬರಿದ್ದ ಬೈಕ್ ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ, ಉಪ್ಪಿನಂಗಡಿಗೆ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ಇನ್ನೊಂದು ಭಾಗದಲ್ಲಿ ಪುತ್ತೂರಿನ ಕಡೆಗೆ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಬೈಕ್ ಸವಾರನ ತಲೆಗೆ ತೀವ್ರತರವಾದ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ :
ಇನ್ನೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…