Featured

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಏ.18ರಂದು ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳಿಪ್ಪಾಡಿ ಕೊಡಿಮರದ ವಿಶ್ವನಾಥ ಪೂಜಾರಿ ಅವರ ಮಗ ಧನರಾಜ್(21.ವ) ಮೃತಪಟ್ಟ ವ್ಯಕ್ತಿ.

ವ್ಯಕ್ತಿಯೋರ್ವ ಚಲಾಯಿಸುತ್ತಿದ್ದ ಬೈಕ್ ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ, ಸಹಸವಾರ ಸೇರಿದಂತೆ ಇಬ್ಬರಿದ್ದ ಬೈಕ್‌ ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ, ಉಪ್ಪಿನಂಗಡಿಗೆ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ಇನ್ನೊಂದು ಭಾಗದಲ್ಲಿ ಪುತ್ತೂರಿನ ಕಡೆಗೆ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಬೈಕ್‌ ಸವಾರನ ತಲೆಗೆ ತೀವ್ರತರವಾದ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ :

ಇನ್ನೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ

Vishwa News 24

Recent Posts

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ – vishwanews24

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…

7 hours ago

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ – vishwanews24

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ.…

7 hours ago

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – vishwanews24

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…

7 hours ago

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು – vishwanews24

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ  ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ…

8 hours ago

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್. ಅಶೋಕ್  – vishwanews24

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್  ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…

8 hours ago

ಕಾಪು : ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ – vishwanews24

ಕಾಪು: ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ ಉಡುಪಿ: ನಗರದಲ್ಲಿ ವಿಚಿತ್ರ ಕಳ್ಳತನ…

9 hours ago