ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲ್ವಾರ್ ಹಿಡಿದುಕೊಂಡು ಪೋಸು ಕೊಟ್ಟಿದ್ದ ಇಬ್ಬರು ಆರೋಪಿಗಳ ಫೊಟೋ ವೈರಲ್ ಆದ ಹಿನ್ನಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ದ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ಗುರುವಾರ ನಡೆದಿದೆ.
ಬಂಧಿತರನ್ನು ಪುತ್ತೂರು ತಾಲೂಕಿನ ಕುರಿಯದ ಕಟ್ಟದ ಬೈಲಿನ ಸುಜಿತ್, ಆರ್ಯಾಪುವಿನ ಮರಿಕೆಯ ಪುಟ್ಟಣ್ಣ ಎಂದು ಗುರುತಿಸಲಾಗಿದೆ. ಆರೋಪಿಗಳು ತಲವಾರು ಹಿಡಿದಿರುವ ಫೊಟೋ ಹಾಕಿ ಸಮಯ ಎಂದು ಶೀರ್ಷಿಕೆ ಬರೆದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದರು.
ಆರೋಪಿಗಳು ತಲ್ವಾರ್ ಹಿಡಿದು ಫೊಟೋ ತೆಗೆದು ಅದನ್ನು ವಾಟ್ಸಪ್‌ನಲ್ಲಿ ಬುಧವಾರ ಸಂಜೆ ಅಪ್ಲೋಡ್ ಮಾಡಿದ್ದರು. ಈ ಫೊಟೋ ಸಾಕಷ್ಟು ವೈರಲ್ ಆಗಿತ್ತು. ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿರುವ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತಡರಾತ್ರಿ ಅವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಗಳ ಪೈಕಿ ಓರ್ವನಾದ ಸುಜಿತ್ ಅವರು ಈ ಹಿಂದೆ ಹಿಂದೂ ಜಾಗರಣಾ ವೇದಿಕೆಯಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…