ಪುತ್ತೂರು : ತುಳು ಚಿತ್ರನಟ,ನಿರ್ದೇಶಕ ದೇವದಾಸ್ ಕಾಪಿಕಾಡರ ಬಿಜೆಪಿ ಪಕ್ಷ ಸೇರ್ಪಡೆ ವಿವಾದ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸ್ಪಷ್ಟನೆ ನೀಡಿದ್ದು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ ಎಂದಿದ್ದಾರೆ.
ಮಾದ್ಯಮಗಳಿಗೆ ಈ ಬಗ್ಗೆ ಹೇಳಿಕೆ ನೀಡಿದ ಅವರು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ. ಪಕ್ಷದ ಸದಸ್ಯನಾಗಿ ಮಾಡುವ ಉದ್ಧೇಶದಿಂದ ಅವರ ಮನೆಗೆ ಹಿರಿಯರು ಭೇಟಿ ನೀಡಿದ್ದರು. ಸದಸ್ಯತ್ವ ಅಭಿಯಾನದ ವಿಚಾರದಲ್ಲಿ ಅವರು ಪೂರಕವಾಗಿ ಸ್ಪಂದಿಸಿದ್ದರು. ಪಕ್ಷಾತೀತವಾಗಿರುವ ಸೆಲೆಬ್ರೆಟಿಗಳ ಮನೆಗೆ ಪಕ್ಷದ ಮುಖಂಡರು ಭೇಟಿಯಾಗೋದು ಸಾಮಾನ್ಯವಾಗಿದ್ದು ಅವರು ಪಕ್ಷದ ಕಾರ್ಯಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುತ್ತಾರೆ ಎಂದಲ್ಲ.
ದೇವದಾಸ್ ಕಾಪಿಕಾಡ್ ರನ್ನು ಇತರ ಪಕ್ಷದವರೂ ಭೇಟಿಯಾಗುತ್ತಾರೆ. ಇದೇ ವಿಚಾರವನ್ನಿಟ್ಟು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎನ್ನುವ ಸುಳ್ಳು ಸುದ್ಧಿ ಹರಡಲಾಗಿದೆ. ದೇವದಾಸ್ ಕಾಪಿಕಾಡ್ ತುಳು ಭಾಷೆಯನ್ನು ರಾಷ್ಟ್ರ ಮಟ್ಟದಲ್ಲಿ ಪರಿಚಯಿಸಿದಂತಹ ಕಲಾವಿದರಾಗಿದ್ದಾರೆ. ಸ್ವಭಾವಿಕವಾಗಿ ಅವರು ಪಕ್ಷದ ಹಿತ ಚಿಂತಕರು ಆಗಿರಬಹುದು. ಈ ಹಿನ್ನಲೆಯಲ್ಲಿ ಅವರನ್ನು ಭೇಟಿ ಮಾಡಿರೋದು ಸತ್ಯ ಅದರೆ ಈ ವಿಚಾರದಲ್ಲಿ ಅವರ ಕಲಾ ಬದುಕಿಗೆ ತೊಂದರೆಯನ್ನುಂಟು ಮಾಡುವ ಪ್ರಯತ್ನ ನಡೆದಿದೆ ಎಂದಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…