ಪುತ್ತೂರು : ದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷ ಎಲ್ಲವನ್ನು ವಿರೋಧಿಸುತ್ತಿದೆ : ನಳಿನ್ ಕುಮಾರ್ ಕಟೀಲ್ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷ ಎಲ್ಲವನ್ನು ವಿರೋಧಿಸುತ್ತಿದೆ : ನಳಿನ್ ಕುಮಾರ್ ಕಟೀಲ್ – Vishwanews24

ಪುತ್ತೂರು : ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆನೂ ತಿಳಿದಿಲ್ಲ, ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷ ಎಲ್ಲವನ್ನು ವಿರೋಧಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶುಕ್ರವಾರ ಇಲ್ಲಿಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಲಸಿಕೆಯನ್ನು ವಿರೋಧಿಸಿದ್ದ ಕಾಂಗ್ರೆಸ್ ಈಗ ಪೆಟ್ರೋಲ್ ಮತ್ತು ಡೀಸೆಲ್ ವಿಷಯವನ್ನು ರಾಜಕೀಯಗೊಳಿಸುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾದ ಕಾರಣ ದೇಶದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಬೇಕಾಗಿದೆ. ಈ ಬೆಳವಣಿಗೆ ಯಾವುದೇ ಪಕ್ಷ ಆಡಳಿತದಲ್ಲಿದ್ದರೂ ನಡೆದುಕೊಂಡು ಬಂದಿದೆ.

ಕೋವಿಡ್ ಸಂಕಷ್ಟದ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯದಂತೆ ಹಾಗೂ ದೇಶದ ಜನತೆಯ ಹಿತದೃಷ್ಟಿಯಿಂದ ಕೇಂದ್ರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಬೆಲೆ ಇಳಿಕೆಯ ಬಗ್ಗೆಯೂ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.