ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಬುಧವಾರ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನ ಹಿಂಬದಿ ಸವಾರರಾಗಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನೇಹಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:
ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಪರಿಚಯಸ್ಥರ ಮದುವೆ ಕಾರ್ಯಕ್ರಮ ಮುಗಿಸಿ ದ್ವಿಚಕ್ರ ವಾಹನಗಳಲ್ಲಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಸವಾರ ಕಾರ್ತಿಕ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…